LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮೇಲೆ ಎಲ್ಲರ ಕಣ್ಣು..!

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿಸಲಿದ್ದಾರೆ. 2026-27ನೇ ಸಾಲಿನ ಬಜೆಟ್ ನಲ್ಲಿ ಏನೆಲ್ಲ ಇರಲಿದೆ ಅನ್ನೋ ಕುತೂಹಲ ಎಲ್ಲರಲ್ಲಿ ಮೂಡಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಗೆ ಏನೆಲ್ಲ ಸಿಗುತ್ತೆ ಅನ್ನೋ ಕುತೂಹಲದಿಂದ ಜನರು ಕಾಯುತ್ತಿದ್ದಾರೆ.

ಮುಖ್ಯಮಂತ್ರಿಯಾಗಿ ಡಿ.ದೇವರಾಜು ಅರಸು ಅವರ ದಾಖಲೆಯನ್ನು ಮುರಿದಿರುವ ಸಿದ್ದರಾಮಯ್ಯನವರು ಇದೀಗ ದಾಖಲೆಯ 17ನೇ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ರೈತರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ಯುವಕರು, ಹೆಣ್ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವಿವಿಧಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವವರು ಸೇರಿದಂತೆ ಖಾಸಗಿ ಕಂಪನಿಗಳು ಸಹ ಈ ಬಜೆಟ್ ನಲ್ಲಿ ತಮಗೆ ಏನು ಸಿಗುತ್ತೆ ಎಂದು ಕಾಯುತ್ತಿದ್ದಾರೆ.

ಇನ್ನು ಈಗಾಗ್ಲೇ 5 ಗ್ಯಾರೆಂಟಿಗಳನ್ನು ಜಾರಿಗೆ ತಂದಿರುವ ಕಾಂಗ್ರೆಸ್ ಸರ್ಕಾರ ಮತ್ತೆ ಏನಾದರೂ ಹೊಸ ಯೋಜನೆಗಳನ್ನು ಘೋಷಣೆ ಮಾಡುತ್ತಾ, ಕಾಯ್ದೆ, ಕಾನೂನುಗಳಲ್ಲಿ ಏನಾದರೂ ಹೊಸತನ ಬರುತ್ತಾ, ಯಾವುದು ದುಬಾರಿ, ಯಾವುದು ಅಗ್ಗ ಆಗುತ್ತೆ ಎಂದು ತಿಳಿದುಕೊಳ್ಳಲು ರಾಜ್ಯದ ಜನತೆ ಶುಕ್ರವಾರದ ಬಜೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಅಲ್ಲದೆ ರಾಜಕೀಯ ಲೆಕ್ಕಾಚಾರ ಹಾಕಿಕೊಂಡಿರುವವರು ಸಹ 2026-27ರ ಆಯವ್ಯಯ ಏನಾಗಿರುತ್ತೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಇದರ ಜೊತೆಗೆ ದಾಖಲೆಯ 17ನೇ ಬಜೆಟ್ ಮಂಡಿಸಿದ ಬಳಿಕ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಕೆಳಗೆ ಇಳಿಯುತ್ತಾರ ಅನ್ನೋ ಕುತೂಹಲ ಸಹ ಇದ್ದೆ ಇದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST