LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಮೇಲ್ಛಾವಣಿ ಕುಸಿದು ನಾಲ್ಕು ಮಕ್ಕಳಿಗೆ ಗಾಯ

ಪ್ರಜಾಸ್ತ್ರ ಸುದ್ದಿ

ಕೊಪ್ಪಳ(Koppala): ಅಂಗನವಾಡಿ ಮೇಲ್ಛಾವಣಿ ಕುಸಿದು ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಮಹಿಬೂಬ್ ನಗರದಲ್ಲಿ ನಡೆದಿದೆ. ಮನ್ವಿತ್, ಸುರಕ್ಷಾ, ಅಮನ್, ಮರ್ದನ್ ಗಾಯಗೊಂಡ ಮಕ್ಕಳಾಗಿದ್ದಾರೆ. ಇವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ಕುಟುಂಬಸ್ಥರಲ್ಲಿ ಆತಂಕ ಮೂಡಿದೆ.

ಇಲ್ಲಿನ ಅಂಗನವಾಡಿಯಲ್ಲಿ 20ಕ್ಕೂ ಹೆಚ್ಚು ಮಕ್ಕಳಿದ್ದರು. ಅದೃಷ್ಟವಶಾತ್ ಉಳಿದವರಿಗೆ ಏನೂ ಆಗಿಲ್ಲ. ಘಟನೆ ಬಗ್ಗೆ ಮಾಹಿತಿ ತಿಳಿದ ಬಳಿಕ ನಗರಸಭೆ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗಾಯಗೊಂಡ ಮಕ್ಕಳ ಚಿಕಿತ್ಸಗೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST