LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೋರಗಿ ಗ್ರಾಮದ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ತಾಲೂಕಿನ ಬೋರಗಿ ಗ್ರಾಮದಲ್ಲಿ ಸರಕಾರಿ ಉನ್ನತಿeಕರಿಸಿದ ಪ್ರೌಢಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಗುರುವಂದನಾ ಮತ್ತು ಗ್ರಾಮದ ವಿವಿಧ ಇಲಾಖೆಗಳಲ್ಲಿ ಸರಕಾರಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಸನ್ಮಾನ ಸಮಾರಂಭ ಇತ್ತೀಚೆಗೆ ನಡೆಯಿತು. ಇದೆ ವೇಳೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೋಡುಗರನ್ನು ರಂಜಿಸಿತು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತಪೋರತ್ಮ ಮಹಾಲಿಂಗೇಶ್ವರ ಮಹಾಸ್ವಾಮಿಗಳು ಮತ್ತು ಶ್ರೀ ಸಮರ್ಥ ಸದ್ಗುರು ಆರೂಢ ನಿತ್ಯಾನಂದ ಮಹಾರಾಜರು ವಹಿಸಿಕೊಂಡಿದ್ದರು. ಕ್ಷೆeತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ ಕಾರ್ಯಕ್ರಮ ಉದ್ಘಾಟಿಸಿದರು. ಎಸ್ ಡಿಎಂಸಿ ಅಧ್ಯಕ್ಷ ಶ್ರೀಶೈಲ ಹಿಪ್ಪರಗಿ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಜಿಲ್ಲಾ ಕೆಡಿಪಿ ಸದಸ್ಯ ಶಿವಣ್ಣ ಕೊಟಾರಗಸ್ತಿ, ಪಿಕೆಪಿಎಸ್ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಸಾವಳಸಂಗ ಜ್ಯೋತಿ ಬೆಳಗಿದರು.



ಶಿಕ್ಷಣ ಸಂಯೋಜಕ ಎಸ್.ಬಿ ಪಾಟೀಲ ಸಸಿಗೆ ನೀರು ಉಣಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸೀತಮ್ಮ ಮಾದರ, ಎಸ್ ಡಿಎಂಸಿ ಉಪಾಧ್ಯಕ್ಷ ಶ್ರೀಕಾಂತ ಬಿಜಾಪುರ ಸರಸ್ವತಿ ಫೋಟೋಗೆ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಬಿಇಒ ಮಹಾಂತೇಶ ಯಡ್ರಾಮಿ, ಬೋರಗಿ ಶಾಲೆಯಲ್ಲಿ ಕಳೆದ 9 ವರ್ಷಗಳಿಂದ ಎಸ್ ಡಿಎಂಸಿ ರಚನೆಯಾಗಿರಲಿಲ್ಲ. 2025-26ರಲ್ಲಿ ರಚನೆಯಾಗಿದ್ದಕ್ಕೆ ಖುಷಿಯಾಗಿದೆ. ಈ ಶಾಲೆ ಪ್ರೌಢಶಾಲೆಯಾಗಿ ಉನ್ನತಿeಕರಣಗೊಂಡಿದ್ದು ಶಾಲೆಗೆ ನೂತನ ಕಟ್ಟಡ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲು ನಾನು ಸಹಕರಿಸುತ್ತೇನೆ ಎಂದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST