LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಮದ್ಯ ಮಾರಾಟದ ವಿರುದ್ಧ ಡಿಸಿ, ಎಸ್ಪಿಗೆ ಮನವಿ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ದಾಭಾ, ಹಳ್ಳಿ ಹಾಗೂ ತಾಂಡಾದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಜಯ ಕರ್ನಾಟಕ ರಕ್ಷಣಾ ಸೇನೆ ವತಿಯಿಂದ ಮನವಿ ಸಲ್ಲಿಸಲಾಗಿದೆ. ಈ ವೇಳೆ ಸಂಘಟನೆಯ ಜಿಲ್ಲಾಧ್ಯಕ್ಷ ಕೃಷ್ಣಾ ಭೋಸಲೆ ಮಾತನಾಡಿ, ಸಿಂದಗಿ ರಸ್ತೆ, ಇಂಡಿ ರಸ್ತೆ, ಅಥಣಿ ರಸ್ತೆ, ಬೆಂಗಳೂರು ರಸ್ತೆ ಹಾಗೂ ಕೋಲಾರ ರಸ್ತೆ ಅಕ್ಕ ಪಕ್ಕದಲ್ಲಿ ಇರುವ ದಾಭಾಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದಲೇ ರಸ್ತೆ ಅಪಘಾತ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಲಿವೆ. ಕುಡಿದ ಅಮಲಿನಲ್ಲಿ ಗಲಭೆಗಳು ಆಗುತ್ತಿದ್ದು, ಕೂಡಲೇ ಇವುಗಳಿಗೆ ಕಡಿವಾಣ ಹಾಕಬೇಕು ಎಂದರು.

ವಿಜಯಪುರ ತಾಲೂಕಿನ ಸುತ್ತಲಿನ ಗ್ರಾಮದಲ್ಲಿ, ಸರ್ಕಾರಿ ಶಾಲೆಗಳ ಪಕ್ಕ ಹಾಗೂ ದೇವಾಲಯಗಳ ಹತ್ತಿರ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಮದ್ಯ ಮಾರುತಿದ್ದಾರೆ. ಗ್ರಾಮಕ್ಕೆ ಸಂಬAಧಿಸಿದ ಅಧಿಕಾರಿಗಳು, ಅಬಕಾರಿ ಅಧಿಕಾರಿಗಳು ಕಣ್ಣಿಗೆ ಕಂಡರೂ ಕಾಣದಂತೆ ಇರುವುದು ಯಾಕೆ ಅಂತ ಗೊತ್ತಾಗುತ್ತಿಲ್ಲ. ಕೂಡಲೇ ದಾಭಾಗಳ ಮೇಲೆ ದಾಳಿ ಮಾಡಲು ವಿಶೇಷ ತಂಡವನ್ನು ರಚಿಸಿ ಇದಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.

ಈ ವೇಳೆ ರಾಜ್ಯ ಉಪಾಧ್ಯಕ್ಷೆ ಮಂಜುಳಾ ವಾಲಿ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಗಳವೆ, ಜಿಲ್ಲಾ ಅಧ್ಯಕ್ಷೆ ಸುಮಿತ್ರಾ ಪಟ್ಟಣಶೆಟ್ಟಿ, ಎಸ್ಸಿ ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಯಮನಪ್ಪ ಬೂದಿಹಾಳ, ಬಸವನ ಬಾಗೇವಾಡಿ ತಾಲೂಕಾ ಅಧ್ಯಕ್ಷ ಸಿದ್ದಮ್ಮ ಹಿರೂರ, ತಾಲೂಕು ಉಪಾಧ್ಯಕ್ಷೆ ಶಶಿಕಲಾ ಹಡಪದ, ಆಟೋ ಘಟಕದ ಜಿಲ್ಲಾಧ್ಯಕ್ಷ ಉಮೇಶ ರುದ್ರಮಣಿ, ಯುವ ಘಟಕ ಜಿಲ್ಲಾಧ್ಯಕ್ಷ ರಾಜು ಬಿಸೆ, ತಾಲೂಕಾ ಅಧ್ಯಕ್ಷ ವಿಠ್ಠಲ ತಳವಾರ, ಜಿಲ್ಲಾ ಮುಖಂಡರಾದ ಮಾದೇವ ಢಗೆ, ರಾಜು ಕೋಟ್ಯಾಳ, ಸಕಾರಾಮ ಪವಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST