ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಎಸ್ ಸಿಪಿ ಹಾಗೂ ಟಿಎಸ್ ಪಿ ಯೋಜನೆಯ ಹಣವನ್ನು ಬೇರೆ ಯೋಜನೆಗೆ ಬಳಸಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಹೇಳಿ ಭೀಮರಾಜ್ಯ ಸೇನೆ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸೋಮವಾರ ಭೇಟಿಯಾದ ಭೀಮರಾಜ್ಯ ಸೇನೆ ರಾಜ್ಯಾಧ್ಯಕ್ಷ ಎನ್.ಶಿವು ಸೋಂಪುರ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಶ್ರೀಕಾಂತ ಬಿಜಾಪುರ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರೇಶ ಚವಾಣ ಅವರು ಮನವಿ ಸಲ್ಲಿಸಿದ್ದಾರೆ.
ಉದ್ಯೋಗ ಭರ್ತಿ, ರಾಜ್ಯದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆ ನೀಡುವ ದೃಷ್ಟಿಯಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾದ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವ ಮೂಲಕ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಸಲ್ಲಿಸಲಾಗಿದೆ.



