LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ರಾಜ್ಯೋತ್ಸವ: ಜಿಲ್ಲಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಾಧಕರನ್ನು ಸನ್ಮಾನಿಸಲಾಗುತ್ತಿದ್ದು, ಜಿಲ್ಲೆಯ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಲೆ, ಸಾಹಿತ್ಯ, ರಂಗಭೂಮಿ, ಸುಗಮ ಸಂಗೀತ, ಜನಪದ ಸಂಗೀತ, ಶಿಲ್ಪಕಲೆ, ನೃತ್ಯ, ಚಿತ್ರಕಲೆ, ಸಮಾಜ ಸೇವೆ, ಕೃಷಿ, ವೈದ್ಯಕೀಯ, ಪತ್ರಿಕೋದ್ಯಮ, ಸಂಕೀರ್ಣ ಸೇರಿ ಇತರೆ ಕ್ಷೇತ್ರಗಳಲ್ಲಿ ತಮ್ಮ ಸಾಧನೆಯ ವಿವರಗಳನ್ನೊಳಗೊಂಡ ಸ್ವ-ಪರಿಚಯ ಮತ್ತು ದಾಖಲೆಗಳೊಂದಿಗೆ ಅಕ್ಟೋಬರ್ 25 ರಸಂಜೆ 5 ಗಂಟೆಯೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಶನ್ ರಸ್ತೆ, ವಿಜಯಪುರ ಕಚೇರಿಗೆ ಸಲ್ಲಿಸಬಹುದಾಗಿದೆ.

ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08352-251261 ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST