LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಗೌರವ ಪ್ರಶಸ್ತಿಗೆ ಮಕ್ಕಳಿಂದ ಅರ್ಜಿ ಆಹ್ವಾನ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿಯಿಂದ(bala vikasa academy) ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದೊಳಗಿನ ಮಕ್ಕಳಿಂದ ಬಾಲ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡೆ, ಸಂಗೀತ, ನೃತ್ಯ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆ ಸೇರಿ ಬಹುಮುಖ ಪ್ರತಿಭೆಯಲ್ಲಿ ಹೀಗೆ ಏಳು ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪುರಸ್ಕೃತ ಮಗುವಾಗಿರಬೇಕು. ಸೂಕ್ತ ದಾಖಲೆಗಳೊಂದಿಗೆ ಆಗಸ್ಟ್ 26ರೊಳಗಾಗಿ ಅರ್ಜಿಯನ್ನು ಅಕಾಡೆಮಿಯ ಕೇಂದ್ರ ಕಛೇರಿ ವಿಳಾಸಕ್ಕೆ ಸಲ್ಲಿಸಬಹುದು.

ಈಗಾಗಲೇ ಬಾಲಗೌರವ ಪ್ರಶಸ್ತಿ ಪಡೆದವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ವೆಬ್‌ಸೈಟ್ ಲಿಂಕ್ https://balavikasaacademy.karnataka.gov.in/ ನಲ್ಲಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿಜಯಪುರದ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST