ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಮಹಿಳಾ ಹೋರಾಟಗಾರ್ತಿ, ಕರ್ನಾಟಕ ಮಹಿಳಾ ಪರ ಜನ ಜಾಗೃತಿ ಸಮಿತಿಯ ವಿಜಯಪುರ ಜಿಲ್ಲಾಧ್ಯಕ್ಷರು ಹಾಗೂ ಸಿಂದಗಿ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆಯಾದ ನೀಲಮ್ಮ ಯಡ್ರಾಮಿ ಅವರಿಗೆ ಕರ್ನಾಟಕದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸಾಮಾಜಿಕ ಹೋರಾಟದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಬೆಂಗಳೂರಿನ ಕರ್ನಾಟಕ ಪ್ರಗತಿಪರ ರೈತಾಪಿ ಸಂಘದ ವತಿಯಿಂದ 2026ನೇ ಸಾಲಿನ ರೈತ ಜನ ಜಾಗೃತಿ ಅಂಗವಾಗಿ ಕಲಬುರಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


