LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿ.ಸರೋಜಾದೇವಿ ದೊಡ್ಡ ವ್ಯಕ್ತಿತ್ವದ ನಟಿ: ಸಿಎಂ ಸಿದ್ದರಾಮಯ್ಯ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕನ್ನಡದ ಖ್ಯಾತ ನಟಿ, ಬಹುಭಾಷಾ ನಟಿ, ಪದ್ಮಭೂಷಣ ಪುರಸ್ಕೃತೆ ಬಿ.ಸರೋಜಾದೇವಿ ಅವರು ಸೋಮವಾರ ನಿಧನರಾಗಿದ್ದಾರೆ. ಇಂದು ಅವರ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಲಿದೆ. ಅವರು ವಾಸಿಸುತ್ತಿದ್ದ ರಸ್ತೆಗೆ ಅವರ ಹೆಸರನ್ನು ಇಡುವ ಕುರಿತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜೊತೆಗೆ ಚರ್ಚಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ಅವರ ಅಂತಿಮ ದರ್ಶನ ಪಡೆದು ಮಾತನಾಡಿದ ಅವರು, ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ. ಅನೇಕ ಬಾರಿ ಸರೋಜಾದೇವಿಯವರನ್ನು ಭೇಟಿ ಮಾಡಿದ್ದೇನೆ. ಎಲ್ಲರೊಂದಿಗೆ ಆತ್ಮೀಯವಾಗಿ, ಪ್ರೀತಿಯಿಂದ ಮಾತನಾಡುತ್ತಿದ್ದರು. ದೊಡ್ಡ ವ್ಯಕ್ತಿತ್ವವಿದ್ದ ನಟಿ ಅವರು. ಅವರ ಸಿನಿಮಾಗಳಲ್ಲಿ ಮಲ್ಲಮ್ಮನ ಪವಾಡ, ಕಿತ್ತೂರು ಚೆನ್ನಮ್ಮ, ಭಾಗ್ಯವಂತರು, ಬಬ್ರುವಾಹನ, ನ್ಯಾಯವೇ ದೇವರು ಸೇರಿದಂತೆ ಅನೇಕ ಚಿತ್ರಗಳನ್ನು ನಾನು ನೋಡಿದ್ದೇನೆ ಎಂದು ಹೇಳಿದರು.

ಬಹುಭಾಷಾ ನಟಿ ಬಿ.ಸರೋಜಾದೇವಿ ಅವರ ನಿಧನ ಇಡೀ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಚಿಕ್ಕವಯಸ್ಸಿನಲ್ಲಿಯೇ ಸಿನಿಮಾರಂಗವನ್ನು ಪ್ರವೇಶಿಸಿ ಏಳು ದಶಕಗಳ ಕಾಲ ಕಲಾವಿದೆಯಾಗಿದ್ದವರು. ಅಭಿನವ ಸರಸ್ವತಿ ಎಂಬ ಬಿರುದು ಚಿಕ್ಕವಯಸ್ಸಿಗೆ ದೊರೆತಿತ್ತು. ಎಲ್ಲಾ ಭಾಷೆಯ ಹೆಸರಾಂತ ನಟರೊಂದಿಗೆ ನಟಿಸಿದ್ದರು. ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ದೇವ್ ಆನಂದ್, ಎಂ.ಜಿ.ಆರ್, ಎನ್.ಟಿ.ಆರ್, ಶಿವಾಜಿ ಗಣೇಶನ್, ರಾಜ್ ಕುಮಾರ್ ಅವರೊಂದಿಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದರು. ಮೃತರ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗುವುದು. ಅವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST