ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸೇರಿದಂತೆ 9 ಅಪರಾಧಿಗಳಿಗೆ ಜಾಮೀನು ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಿನಯ ಕುಲಕರ್ಣಿ ಜಾಮೀನು ರದ್ದುಗೊಳಿಸಿದ್ದು, 2 ವಾರಗಳಲ್ಲಿ ಶರಣಾಗುವಂತೆ ಆದೇಶಿಸಿದೆ.
ಕರ್ನಾಟಕ ಸರ್ಕಾರ, ಸಿಬಿಐ ಹಾಗೂ ಇತರರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿ ಆದೇಶ ಕಾಯ್ದಿರಸಲಾಗಿತ್ತು. ಬುಧವಾರ ನ್ಯಾಯಮೂರ್ತಿಗಳಾದ ಪ್ರಶಾಂತಕುಮಾರ ಮಿಶ್ರಾ, ಚಂದ್ರಶೇಖರ ಅವರಿದ್ದ ಪೀಠ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೆ 2 ವಾರಗಳಲ್ಲಿ ಶರಣಾಗುವಂತೆ ವಿನಯ ಕುಲಕರ್ಣಿಗೆ ಸೂಚಿಸಿದೆ.


