ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅಗೌರವದ ಮಾತುಗಳನ್ನು ಆಡಿರುವ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿ ಭೀಮರಾಜ ಸೇನೆ, ಕರ್ನಾಟಕ ಭೀಮ ಸೇನೆ, ಭೀಮ ಆರ್ಮಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಿಚಾರವಾದ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ದಕ್ಷಿಣ ವಲಯ ಉಪವಿಭಾಗದ ಆಯುಕ್ತರನ್ನು ಭೇಟಿ ಮಾಡಿ ಎಫ್ಐಆರ್ ದಾಖಲಿಸುವಂತೆ ಮನವಿ ಸಲ್ಲಿಸಲಾಗಿದೆ.
ಅಂಬೇಡ್ಕರ್ ಅವರ ಗೌರವಕ್ಕೆ ದಕ್ಕೆ ತರುವ ರೀತಿಯ ಮಾತುಗಳನ್ನು ಆಡಿರುವುದನ್ನು ಖಂಡಿಸುತ್ತೇವೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದರು. ಈ ವೇಳೆ ಭೀಮರಾಜ ಸೇನೆ ರಾಜ್ಯಾಧ್ಯಕ್ಷ ಶಿವಕುಮಾರ ನಾಟಿಕಾರ, ಕರ್ನಾಟಕ ಭೀಮ ಸೇನೆ ರಾಜ್ಯಾಧ್ಯಕ್ಷ ರಾಮಲಿಂಗಯ್ಯ, ಭೀಮ ಆರ್ಮಿ ರಾಜ್ಯಾಧ್ಯಕ್ಷ ಗೋಲರಾಜ, ಸಿದ್ದಾಪುರ ಮಂಜುನಾಥ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.



