LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿ ಗಲಾಟೆ, ಕೇಸ್ ವಾಪಸ್ ವಿರುದ್ಧ ಬಿಜೆಪಿ ಪ್ರತಿಭಟನೆ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಹಳೇ ಹುಬ್ಬಳ್ಳಿಯ(Old Hubballi) ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿ ಹಿಂಸಾಚಾರ ಸೃಷ್ಟಿಸಿದ ಪ್ರಕರಣವನ್ನು ಹಿಂದಕ್ಕೆ ಪಡೆಯಲು ಸಚಿವ ಸಂಪುಟ ನಿರ್ಧಾರ ಮಾಡಿದೆ. ಇದನ್ನು ಖಂಡಿಸಿ ಇಂದು ಬಿಜೆಪಿ ಪ್ರತಿಭಟನೆಗೆ ಸಜ್ಜಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರೀಡಂ ಪಾರ್ಕ್ ಎದುರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿದೆ.

ಜಿಲ್ಲಾ ಕೇಂದ್ರಗಳಲ್ಲೂ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ. ಒಂದು ಸಮುದಾಯದ ಓಲೈಕೆಗೆ ಈ ರೀತಿ ಮಾಡುತ್ತಿರುವುದು ಸರಿಯಲ್ಲ. ಈ ಬಗ್ಗೆ ಇನ್ನು ಪೊಲೀಸ್ ತನಿಖೆ ನಡೆಯುತ್ತಿದೆ. ಹೀಗಿದ್ದರೂ ರಾಜ್ಯ ಸರ್ಕಾರ ಪ್ರಕರಣ ವಾಪಸ್ ಪಡೆಯುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST