LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಾವಣಗೆರೆ: ಶ್ರೀನಿವಾಸ್ ದಾಸಕರಿಯಪ್ಪಗೆ ಬಿಜೆಪಿ ಟಿಕೆಟ್

ಪ್ರಜಾಸ್ತ್ರ ಸುದ್ದಿ

ದಾವಣಗೆರೆ(Davanagere): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಶಾಮನೂರ ಶಿವಶಂಕರಪ್ಪ ನಿಧನದಿಂದ ತೆರವಾಗಿರುವ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ಬಿಜೆಪಿ ಎಸ್ಟಿ ಮೋರ್ಚಾದ ರಾಜ್ಯ ಘಟಕದ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪಗೆ ಟಿಕೆಟ್ ನೀಡಲಾಗಿದೆ.

ದಾಸಕರಿಯಪ್ಪ ಸೇರಿ 8 ಜನರ ಹೆಸರು ಚರ್ಚೆಯಲ್ಲಿತ್ತು. ಪರಾಜಯ ಅಭ್ಯರ್ಥಿ ಬಿ.ಜಿ ಅಜಯಕುಮಾರ್, ಯಶವಂತರಾವ್ ಜಾಧವ್ ಸೇರಿ 8 ಜನರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಬಿಜೆಪಿ ಹೈಕಮಾಂಡ್ ದಾಸಕರಿಯಪ್ಪಗೆ ಟಿಕೆಟ್ ನೀಡಿದೆ. ಇವರ ತಂದೆ ಮೂರು ಅವಧಿಗೆ ಹರಿಹರ-ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. ಶ್ರೀನಿವಾಸ್ ಎಪಿಎಂಸಿ ವರ್ತಕರಾಗಿ, ವಿದ್ಯುತ್ ಗುತ್ತಿಗೆದಾರರಾಗಿದ್ದು, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ 4 ವರ್ಷ ಕೆಲಸ ಮಾಡಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST