LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಸ್ಥಾನದಿಂದ ನಿರ್ಗಮನಕ್ಕೂ ಮುನ್ನ ಆಶೀರ್ವಾದ, ಆಲಿಂಗನ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೂ ಮೊದಲು ಗುರುವಾರ ಮುಂಜಾನೆ ಸಚಿವ ಸಂಪುಟದ ಸಹದ್ಯೋಗಿಗಳು, ಆಪ್ತರೊಂದಿಗೆ ಬ್ರೇಕ್ ಫಾಸ್ಟ್ ಸಭೆ ನಡೆಸಲಾಗಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕಾವೇರಿಯಲ್ಲಿ ನಾಯಕರು ಸೇರಿದ್ದಾರೆ. ಈ ವೇಳೆ ಹೈಕಮಾಂಡ್ ನಾಯಕರೊಂದಿಗೆ ಏನೆಲ್ಲ ಮಾತುಕತೆ ಆಗಿದೆ ಅನ್ನೋದರ ಕುರಿತು ಸೂಕ್ಷ್ಮವಾಗಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಸಿದ್ದರಾಮಯ್ಯ ಬಳಿಕ ಸಿಎಂ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ ಅವರು ಬರಲಿದ್ದಾರೆ ಎಂದು ಹೇಳಲಾಗುತ್ತಿದೆ. ಸರ್ಕಾರ ರಚನೆಯ ಸಂದರ್ಭದಲ್ಲಿ ಮಾತುಕತೆ ಆದಂತೆ ನಡೆದುಕೊಳ್ಳಬೇಕು ಎಂದು ಹೈಕಮಾಂಡ್ ನಾಯಕರು ಹೇಳಿದ್ದರಿಂದ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರಂತೆ. ರಾಜ್ಯಪಾರ ಭೇಟಿಗೆ ಸಮಯ ಕೇಳಿದ್ದು, ಆದರೆ ಅವರ ಪತ್ನಿಗೆ ಅನಾರೋಗ್ಯದ ಹಿನ್ನಲೆಯಲ್ಲಿ ಬುಧವಾರ ತಡರಾತ್ರಿ ಇಂಧೋರ್ ಗೆ ತೆರಳಿದ್ದಾರೆ. ಹೀಗಾಗಿ ರಾಜೀನಾಮೆ ಕುತೂಹಲ ಮೂಡಿದೆ.

ಇನ್ನು ಬ್ರೇಕ್ ಫಾಸ್ಟ್ ಸಭೆಯಲ್ಲಿ ಸಿದ್ದರಾಮಯ್ಯನವರ ಕಾಲನ್ನು ಮುಟ್ಟಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆಶೀರ್ವಾದ ಪಡೆದಿದ್ದಾರೆ. ಇಬ್ಬರು ನಾಯಕರು ಆಲಿಂಗನ ಮಾಡಿಕೊಳ್ಳುವ ಮೂಲಕ ಅಭಿನಂದನೆ, ಧನ್ಯವಾದಗಳನ್ನು ಪರಸ್ಪರ ಹಂಚಿಕೊಂಡಿದ್ದಾರೆ. ಇದೆಲ್ಲ ನೋಡಿದರೆ ಸಿದ್ದರಾಮಯ್ಯ ಪದತ್ಯಾಗ ಖಂಡಿತವಾಗಲಿದೆ. ರಾಜ್ಯಾಪಲರು ಬಂದ ಬಳಿಕ ಈ ಪ್ರಹಸನಕ್ಕೆ ತೆರೆ ಬೀಳಲಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST