LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಪತ್ತೆಯಾಗಿದ್ದ ಯುವತಿ ಶವ ಪತ್ತೆ: ಅತ್ಯಾಚಾರ, ಕೊಲೆ

ಪ್ರಜಾಸ್ತ್ರ ಸುದ್ದಿ

ಬೀದರ(Bidara): ಕಳೆದ ಆಗಸ್ಟ್ 29ರಂದು ನಾಪತ್ತೆಯಾಗಿದ್ದ(Missing) 19 ವರ್ಷದ ಯುವತಿಯ ಶವ ಪತ್ತೆಯಾಗಿದೆ. ಆಕೆಯನ್ನು ಅತ್ಯಾಚಾರ ಮಾಡಿ ಕೊಲೆ(Rape and Murder) ಮಾಡಲಾಗಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಕೊಲೆಗೂ ಮೊದಲು ಯುವತಿಯ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ. ಆದರೂ ವೈದ್ಯಕೀಯ ವರದಿ ಬಂದ ಮೇಲೆ ಪೂರ್ತಿ ಸತ್ಯ ತಿಳಿಯಲಿದೆ ಎಂದಿದ್ದಾರೆ.

ಗುಣತೀರ್ಥವಾಡಿ ಗ್ರಾಮದಿಂದ ಯುವತಿ ನಾಪತ್ತೆಯಾದ ನಂತರ ಪೋಷಕರು ಹುಡುಕಾಟ ನಡೆಸಿದ್ದಾರೆ. 2 ದಿನಗಳ ಬಳಿಕ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆಪ್ಟೆಂಬರ್ 1 ರಂದು ಯುವತಿಯ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಮೂವರನ್ನು(Arrest) ಬಂಧಿಸಲಾಗಿದೆ. ತಾಂತ್ರಿಕ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದರು. ಯುವತಿ ನಾಪತ್ತೆಯಾದ ದಿನದಂದು ಆಕೆಯ ಸಂಪರ್ಕದಲ್ಲಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಕೊಲೆಯ ಪ್ರಮುಖ ಆರೋಪಿ ಅದೆ ಗ್ರಾಮದವನಾಗಿದ್ದಾನೆ. ಇಬ್ಬರು ಆತನಿಗೆ ಸಹಕಾರ ನೀಡಿದ್ದಾರೆ. ಮೃತ ಯುವತಿ ಎಸ್ಟಿ ಸಮುದಾಯಕ್ಕೆ ಸೇರಿದವಳಾಗಿದ್ದು, ಎಸ್ಸಿ, ಎಸ್ಟಿ(SC ST Act) ಕಾಯ್ದೆ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST