ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಮೀನು ವಿವಾದ ಸಂಬಂಧ 6 ಜನರನ್ನು ಹೊಲದಲ್ಲಿ ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಚಡಚಣ ಠಾಣೆ ಪಿಎಸ್ಐ ಸೋಮೇಶ ಗೆಜ್ಜಿ ಅವರನ್ನು ಅಮಾನತುಗೊಳಿಸಿ ಎಸ್ಪಿ ಆದೇಶಿಸಿದ್ದಾರೆ. ಮೇ 29ರಂದು ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಬರುವ ಹೊಲದಲ್ಲಿ 6 ಜನರ ಮೇಲೆ ಸುಮಾರು 20ಕ್ಕೂ ಹೆಚ್ಚು ಜನರು ದಾಳಿ ಮಾಡಿ ಹತ್ಯೆ ಮಾಡಿದ್ದರು.
ಈ ಘಟನೆಯಲ್ಲಿ ನಿರಾಳೆ ಕುಟುಂಬದ ಐವರು ಹಾಗೂ ಕೆಲಸಕ್ಕೆ ಬಂದಿದ್ದ ಓರ್ವ ಹತ್ಯೆಯಾಗಿದ್ದಾನೆ. ಪಾಟೀಲ ಕುಟುಂಬಸ್ಥರಿಂದ ಈ ಕೃತ್ಯ ನಡೆದಿದೆ. ಈ ಘಟನೆಗೂ ಮೊದಲು ಎರಡು ಕಡೆಯವರು ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದರಂತೆ. ಇದು ಗೊತ್ತಿದ್ದು ಸಹ ಪಿಎಸ್ಐ ಸೋಮೇಶ ಗೆಜ್ಜಿ ಪ್ರಕರಣವನ್ನು ನಿರ್ವಹಿಸುವಲ್ಲಿ ಕರ್ತವ್ಯಲೋಪ ಕಂಡು ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅಮಾನುತು ಮಾಡಿ ಆದೇಶಿಸಿದ್ದಾರೆ.



