ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕನ್ನಡದ ಹಿರಿತೆರೆ ಹಾಗೂ ಕಿರುತೆರೆಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. 47 ವರ್ಷದ ದಿಲೀಪ್ ರಾಜ್ ನಿಧನದ ಸುದ್ದಿ ಕನ್ನಡ ಚಿತ್ರರಂಗದ ಮಂದಿಗೆ ಶಾಕ್ ಆಗಿದೆ. ಹಾಸನ ಜಿಲ್ಲೆಯ ಅರಸೀಕೆರೆಯ ದಿಲೀಪ್ ರಾಜ್ ಹಲವಾರು ಸಿನಿಮಾ, ಧಾರವಾಹಿಗಳಲ್ಲಿ ನಟಿಸಿದ್ದಾರೆ.
ಮಿಲನ, ಯು ಟರ್ನ್, ಅಂಬಿ ನಿಂಗೆ ವಯಸ್ಸಾಯ್ತೋ, ನಿಮ್ಮ ವಸ್ತುಗಳಿಗೆ ನಿವೇ ಜವಾಬ್ದಾರರು ಸೇರಿದಂತೆ 24 ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಲವ್ ಮಾಕ್ಟೇಲ್-3 ಸಿನಿಮಾದಲ್ಲಿ ನಟಿಸಿದ್ದಾರೆ. ಹಿಟ್ಲರ್ ಕಲ್ಯಾಣ ಧಾರವಾಹಿ ಸೇರಿದಂತೆ ಹಲವು ಸೀರಿಯಲ್ ಗಳಲ್ಲಿಯೂ ಮಿಂಚಿದ್ದಾರೆ. ಹಿಟ್ಲರ್ ಕಲ್ಯಾಣ ಸೀರಿಯಲ್ ಪಾತ್ರ ಅವರಿಗೆ ಹೆಚ್ಚು ಜನಪ್ರಿಯತೆ ತಂದು ಕೊಟ್ಟಿತು.



