LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾವು, ತಾಯಿ ಆತ್ಮಹತ್ಯೆ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಬಚ್ಚಲು ಮನೆಯಲ್ಲಿದ್ದ ಬಕೆಟ್ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಮೃತಪಟ್ಟ ಕರುಣಾಜನಕ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮಗು ಮೃತಪಟ್ಟಿದ್ದರಿಂದ ನೊಂದ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಾಲೇಔಟ್ ನಲ್ಲಿ ಇಂತಹದೊಂದು ಹೃದಯವಿದ್ರಾವಕ ಘಟನೆ ನಡೆದಿದೆ.

ಭೈರವೇಶ್ವರದ ನಗರದ ನಿವಾಸಿ ಮಹಾಂತೇಶ ಹಾಗೂ ಪ್ರತಿಭಾ ದಂಪತಿಯ 11 ತಿಂಗಳ ಗಂಡು ಮಗು ಅಗಸ್ತ್ಯ ಬಕೆಟ್ ನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಈ ಘಟನೆಯಿಂದ ನೊಂದ ತಾಯಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಡೆತ್ ನೋಟ್ ನಲ್ಲಿ ಏನಿದೆ?: ನಾನು ಬಟ್ಟೆ ತರಲು ಹೋದಾಗ ಈ ಘಟನೆ ನಡೆದಿದೆ. ಮಗುವಿನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ. ಮೃತ ಪ್ರತಿಭಾ ಮೊದಲು 15 ಮಾತ್ರೆಗಳನ್ನು ತೆಗೆದುಕೊಂಡಿದ್ದಾರಂತೆ. ನಂತರ ಕೈ ಕಯ್ದುಕೊಂಡಿದ್ದು ರಕ್ತ ಬರದೆ ಇದ್ದಾಗ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಕೆಲಸದಿಂದ ಪತಿ ಮನೆಗೆ ಬಂದಾಗ ದೃಶ್ಯ ಕಂಡು ಆಘಾತಕ್ಕೆ ಒಳಗಾಗಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST