LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

2ನೇ ದಿನ ಮುಂದುವರೆದ ಸಿಜೆಪಿ ಪ್ರತಿಭಟನೆ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮಗೆ ಆಗ್ರಹಿಸಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಭಾನುವಾರವು ಪ್ರತಿಭಟನೆಗೆ ಕರೆ ನೀಡಲಾಗಿದ್ದು, ನಗರದ ಹಲವು ಕಡೆಗಳಲ್ಲಿ ಸಂಚಾರ ನಿಯಮದಲ್ಲಿ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಮಂಡಿ ಹೌಸ್, ಪಟೇಲ್ ಚೌಕ್, ಜಂತರ್ ಮಂತರ್, ಕನ್ನಾಟ್ ಪ್ಲೇಸ್ ಸೇರಿದಂತೆ ಹಲವು ಕಡೆಗಳಲ್ಲಿ ಸಂಚಾರಕ್ಕೆ ಸಮಸ್ಯೆ ಆಗುವ ಸಾಧ್ಯತೆಯಿದೆ. ಹೀಗಾಗಿ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ರೈಲ್ ಭವನ ಸರ್ಕಲ್, ಜೈ ಸಿಂಗ್ ರಸ್ತೆ, ಸಂಸದ್ ಮಾರ್ಗ ಜಂಕ್ಷನ್, ಅಶೋಕ ರಸ್ತೆ, ಜಂತರ್ ಮಂತರ್ ರಸ್ತೆ, ಜನಪಥ್ ಜಂಕ್ಷನ್, ಪಟೇಲ್ ಚೌಕ್, ಟಾಲ್ ಸ್ಟಾಯ್ ಮಾರ್ಗ, ಗೋಲ್ ಡಾಕ್ ಖಾನ್ ಸೇರಿದಂತೆ ಹಲವು ಕಡೆ ಸಂಚಾರಕ್ಕೆ ನಿರ್ಬಂಧಿಸಲಾಗಿದೆ.

ಸ್ಟೂಡೆಂಟ್ ಫಡರೇಷನ್ ಆಫ್ ಇಂಡಿಯಾ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಈ ಪ್ರತಿಭಟನೆಗೆ ಬೆಂಬಲ ನೀಡಿವೆ. ಮುಖ್ಯ ಚುನಾವಣಾ ಆಯುಕ್ತರನ್ನು ಹುದ್ದೆಯಿಂದ ತೆಗೆದು ಹಾಕುವ ತನಕ ಪ್ರತಿದಿನ ಜಂತರ್ ಮಂತರ್ ತನಕ ಮೆರವಣಿಗೆ ನಡೆಸಲಾಗುವುದು ಎಂದು ಸಿಜೆಪಿ ನಾಯಕರು ಹೇಳಿದ್ದಾರೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST