LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿಯಲ್ಲಿ ಸಿಎಂ, ಡಿಸಿಎಂ ಹಾಗೂ ಸಚಿವರು: ಕುತೂಹಲ ಮೂಡಿಸಿದ ಚರ್ಚೆ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಹಿರಿಯ ಸಚಿವರು, ಪರಿಷತ್ ಸದಸ್ಯರು ದೆಹಲಿಯಲ್ಲಿ ಸೇರಿದ್ದಾರೆ. ಕಾಂಗ್ರೆಸ್ ಪಕ್ಷದ ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರನ್ನು ಮಂಗಳವಾರ ಭೇಟಿಯಾದ ಸಿಎಂ ಚರ್ಚೆ ನಡೆಸಿದ್ದಾರೆ.

ಎಐಸಿಸಿ ಇಂದಿರಾ ಭವನದಲ್ಲಿ ಸೇರಿದ ನಾಯಕರು ಉಪಹಾರ ಸೇವಿಸಿದ್ದಾರೆ. ಈ ವೇಳೆ ಸಿಎಂನೊಂದಿಗೆ ಸಚಿವರಾದ ಜಿ.ಪರಮೇಶ್ವರ, ಹೆಚ್.ಸಿ ಮಹಾದೇವಪ್ಪ, ಎಂ.ಬಿ ಪಾಟೀಲ, ಸತೀಶ ಜಾರಕಿಹೊಳಿ, ಕೆ.ಜೆ ಜಾರ್ಜ್, ಭೈರತಿ ಸುರೇಶ, ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಸೇರಿದಂತೆ ಇತರರು ಇದ್ದರು. ಇದಾದ ಬಳಿಕ ಸಿಎಂ ಹಾಗೂ ಡಿಸಿಎಂ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.

ಸಚಿವ ಸಂಪುಟ ಪುನರ್ ರಚನೆ, ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಹೈಕಮಾಂಡ್ ಸೂಚನೆ ಮೇರೆಗೆ ರಾಜ್ಯ ನಾಯಕರು ದೆಹಲಿಗೆ ದೌಡಾಯಿಸಿದ್ದಾರೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಮೂಡಿದೆ. ಏನು ಬದಲಾವಣೆ ಆಗುತ್ತೆ ಎಂದು ಎಲ್ಲರೂ ಕಾಯುತ್ತಿದ್ದಾರೆ. ಹಲವು ತಿಂಗಳುಗಳಿಂದ ನಡೆಯುತ್ತಿರುವ ನಾಯಕತ್ವ ಬದಲಾವಣೆ ಆಟಕ್ಕೆ ತೆರೆ ಬೀಳುತ್ತಾ, ಸಂಪುಟ ಪುನರ್ ರಚನೆಗೆ ಗ್ರೀನ್ ಸಿಗ್ನಲ್ ಸಿಗುತ್ತಾ ಕಾದು ನೋಡಬೇಕಿದೆ

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST