LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧಿ ಸಿದ್ದಾಂತಗಳನ್ನು ನಾವು ಗೌರವಿಸಬೇಕು: ಸಿಎಂ ಸಿದ್ದರಾಮಯ್ಯ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮಹಾತ್ಮ ಗಾಂಧಿಯವರ ಪುಣ್ಯ ಸ್ಮರಣೆ ಹಿನ್ನಲೆಯಲ್ಲಿ ಇಂದು ವಿಧಾನಸೌಧ ಆವರಣದಲ್ಲಿನ ಗಾಂಧಿ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸೇರಿದಂತೆ ಇತರೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗಾಂಧೀಜಿಯವರನ್ನು ಜನವರಿ 30ರಂದು ಹತ್ಯೆ ಮಾಡಲಾಯಿತು. ಇದು ಅತ್ಯಂತ ದುಃಖದ ದಿನ. ಅವರು ಬಿಟ್ಟು ಹೋದ ಸಿದ್ಧಾಂತಗಳನ್ನು ನಾವೆಲ್ಲ ಗೌರವಿಸಬೇಕು ಎಂದರು.

ಮಹಾತ್ಮಾ ಗಾಂಧೀಜಿಯವರು ಕೇವಲ ಸ್ವಾತಂತ್ರ್ಯ ಹೋರಾಟ ಮಾಡಲಿಲ್ಲ, ಈ ದೇಶಕ್ಕೆ ಸ್ವಾತಂತ್ರ್ಯ ದೊರೆತ ಮೇಲೆ ದೇಶ ಹೇಗಿರಬೇಕೆಂದು ಪರಿಹಾರಗಳನ್ನು ನೀಡಿದ್ದರು. ಭಾರತ ದೇಶ ಗ್ರಾಮಗಳ ದೇಶ. ಗ್ರಾಮಗಳ ಅಭಿವೃದ್ಧಿಯಾಗದೆ ದೇಶ ಅಭಿವೃದ್ಧಿ ಆಗುವುದಿಲ್ಲ ಎಂದು ಹೇಳಿದ್ದರು. ಅದಕ್ಕಾಗಿಯೇ ಗ್ರಾಮ ಸ್ವರಾಜ್ಯ ಎಂಬ ಪರಿಕಲ್ಪನೆಯನ್ನು ಪ್ರತಿಪಾದಿಸಿದ್ದರು. ಗ್ರಾಮಗಳು ಸ್ವಾವಲಂಬಿಗಳಾಗಬೇಕು.ಆಗ ಮಾತ್ರ ಜನ, ದೇಶ ಸ್ವಾವಲಂಬಿಗಳಾಗಲು ಸಾಧ್ಯ. ಭಾರತದಲ್ಲಿ ಗುಡಿ ಕೈಗಾರಿಕೆಗಳು, ಅತಿ ಸಣ್ಣ ಕೈಗಾರಿಕೆಗಳು ಆರ್ಥಿಕತೆಯ ತಳಹದಿ. ಅದಕ್ಕೆ ಉತ್ತೇಜನ ನೀಡಬೇಕು ಎಂದು ಕರೆ ನೀಡಿದ್ದರು. ಗಾಂಧಿ ಭಾರತ ಕಟ್ಟುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಬೇಕು. ಅವರ ಮೌಲ್ಯಗಳನ್ನು ರೂಢಿಸಿಕೊಂಡು ಅದರಂತೆ ನಡೆಯುವ ಪ್ರಯತ್ನ ಮಾಡಬೇಕು ಎಂದರು.

ಜನವರಿ 30, 1948 ರಂದು ಮಹಾತ್ಮ ಗಾಂಧೀಜಿಯವರನ್ನು ಹಂತಕ ಗೋಡ್ಸೆ ಹತ್ಯೆ ಮಾಡಿದ ದಿನ. ಗಾಂಧೀಜಿಯವರು ನನ್ನ ಜೀವನವೇ ನನ್ನ ಸಂದೇಶ ಎಂದು ಹೇಳಿದ್ದರು. ಅವರ ಹೋರಾಟದ ಬದುಕು, ಅಹಿಂಸೆ, ಸತ್ಯಾಗ್ರಹ ಇವು ನಮಗೆ ಪ್ರೇರಣೆ. ಜಗತ್ತಿನಲ್ಲಿ ಸತ್ಯ, ಅಹಿಂಸೆ, ಸತ್ಯಾಗ್ರಹದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಜಗತ್ತಿನ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಗಾಂಧಿ ಹಾಗೂ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಹೇಳಿದ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ ನಮ್ಮದು. ಇಲ್ಲಿ ಯಾವುದೇ ಜಾತಿ, ಧರ್ಮ ಕೀಳಲ್ಲ, ಮೇಲಲ್ಲ. ಸಂವಿಧಾನದ ಮೌಲ್ಯಗಳನ್ನು ಸಂರಕ್ಷಿಸಬೇಕಿದೆ. ಆದರೆ, ಕಳೆದ ಕೆಲ ವರ್ಷಗಳಿಂದ ಒಕ್ಕೂಟ ವ್ಯವಸ್ಥೆ ವಿರೋಧಿ ಶಕ್ತಿಗಳು ದೇಶವನ್ನು ಹಾಳು ಮಾಡುತ್ತಿವೆ. ಗಾಂಧಿಯನ್ನು ಕೊಂದ ವ್ಯಕ್ತಿಯನ್ನು ಬಿಜೆಪಿ, ಆರ್ ಎಸ್ಎಸ್ ಹೊಗಳುತ್ತವೆ ಎಂದು ಕಿಡಿ ಕಾರಿದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST