LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷ್ಣ ಮೇಲ್ಡಡೆ ಯೋಜನೆ-3 ಪೂರ್ಣಗೊಳಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್ 519.60 ಮೀಟರ್ ನಿಂದ 524.26 ಮೀಟರ್ ವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಹಂತ ಹಂತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಯೋಜನೆಗಾಗಿ ಮುಳುಗಡೆ ಹೊಂದಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅಂದಾಜು ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ.

ಇದುವರೆಗೆ 28,967 ಎಕರೆ ಸ್ವಾಧೀನಪಡಿಸಲಾಗಿದ್ದು, 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ. ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾಗಲಿರುವ 188 ಗ್ರಾಮಗಳಿಗೆ ಸಂಬಂಧಿಸಿದಂತೆ 73,020 ಎಕರೆ ಜಮೀನು ಭೂಸ್ವಾಧೀನಕ್ಕೆ ಬಾಕಿಯಿದೆ. 2022ರಲ್ಲಿ ಅಂದಿನ ಸರ್ಕಾರ ಮುಳುಗಡೆಯಾಗುವ ಜಮೀನನ್ನು ಎರಡು ಹಂತದಲ್ಲಿ ಭೂಸ್ವಾಧೀನಪಡಿಸುವ ನಿರ್ಧಾರ ಕೈಗೊಂಡಿತ್ತು. ಇದನ್ನು ಬದಲಾಯಿಸಿ ಈಗ ಪ್ರಥಮ ಪ್ರಾಶಸ್ತ್ಯದಲ್ಲಿ ಒಂದೇ ಹಂತದಲ್ಲಿ ಈ ಜಮೀನು ಭೂಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗುವುದು. ಜಮೀನು ಕಳೆದುಕೊಳ್ಳುವ ರೈತರಿಗೆ ಜಮೀನಿನ ಮಾರುಕಟ್ಟೆ ದರ, ಆಸ್ತಿಯ ಮಾರ್ಗದರ್ಶಿ ಮೌಲ್ಯ, ಭೂಸ್ವಾಧೀನ ಕಾಯ್ದೆಯನ್ನು ಗಮನದಲ್ಲಿರಿಸಿ ನ್ಯಾಯಯುತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ.

ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ 20 ಸಾವಿರ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಈ ಪ್ರಕರಣಗಳನ್ನು ಹಿಂಪಡೆದುಕೊಂಡು ಸಹಮತದ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು ಎಂದರು. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಹೆಚ್.ಕೆ ಪಾಟೀಲ, ಪರಿಷತ್ ಸದಸ್ಯ ಬಸವರಾಜ್ ರಾಯರೆಡ್ಡಿ ಸೇರಿ ಶಾಸಕರು, ಪರಿಷತ್ ಸದಸ್ಯರು, ಹಿರಿಯ ಅಧಿಕಾರಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST