LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯತ್ನಾಳ್ ಪ್ರಶ್ನೆಗೆ ಮೊದಲು ಉತ್ತರಿಸಿ: ಸಿಎಂ ಸಿದ್ದರಾಮಯ್ಯ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ನಡೆಸುತ್ತಿರುವ ವಾಗ್ದಾಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಮಗೆ ಪ್ರಶ್ನೆ ಕೇಳುವ ಮೊದಲು ನಿಮ್ಮದೆ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ನಿರಂತರವಾಗಿ ಪಕ್ಷದ ಅಧ್ಯಕ್ಷರಾದ ವಿಜಯೇಂದ್ರ ವಿರುದ್ಧ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ಧೈರ್ಯ ತೋರಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕಗೆ ಹೇಳಿದ್ದಾರೆ.

ವಾಲ್ಮೀಕಿ ನಿಗಮದ ಪ್ರಕರಣವನ್ನು ಎಸ್ಐಟಿಗೆ ಕೊಟ್ಟಿದ್ದೇವೆ. ನಿಮಗೆ ಇಲ್ಲವೆ ನಿಮ್ಮ ಪಕ್ಷಕ್ಕೆ ಏನಾದರೂ ಹೇಳುವುದಿದ್ದರೆ ಇಲ್ಲವೇ ಕೇಳುವುದಿದ್ದರೆ ಎಸ್ಐಟಿ ಮುಂದೆ ಹೋಗಿ ಕೇಳಿ ಇಲ್ಲ ಹೇಳಿ. ಇದನ್ನು ಬಿಟ್ಟು ಹಾದಿಬೀದಿಯಲ್ಲಿ ಮಾತನಾಡುವವರಂತೆ ತಾವೇ ಕತೆ ಕಟ್ಟಿಕೊಂಡು ತಲೆಬುಡ ಇಲ್ಲದ ಅರ್ಥಹೀನ ಪ್ರಶ್ನೆಗಳನ್ನು ನನಗೆ ಕೇಳಿ ನಿಮ್ಮ ಸ್ಥಾನದ ಗೌರವವನ್ನು ನೀವೇ ಕಳೆದುಕೊಳ್ಳಬೇಡಿ.

ಭ್ರಷ್ಟಾಚಾರ, ವಿದ್ರೋಹ ಮತ್ತು ಸ್ವಜನಪಕ್ಷಪಾತವೂ ಸೇರಿದಂತೆ ಯತ್ನಾಳ ಅವರು ಮಾಡುತ್ತಿರುವ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ. ಇಂತಹ ಆರೋಪಗಳನ್ನು ಮಾಡಿದ ನಂತರವೂ ಅವರ ವಿರುದ್ಧ ಬಿಜೆಪಿ ಹೈಕಮಾಂಡ್ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿರುವುದನ್ನು ನೋಡಿದರೆ ಅವರ ಆರೋಪಗಳಲ್ಲಿ ಸತ್ಯಾಂಶ ಇರುವುದನ್ನು ಪಕ್ಷದ ಹೈಕಮಾಂಡ್ ಕೂಡ ಒಪ್ಪಿಕೊಂಡಂತೆ ಕಾಣುತ್ತೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST