LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮುಡಾ(MUDA Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಮವಾರ ಹೈಕೋರ್ಟ್(High Court) ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸಿಎಂ ಪರ ವಕಾಲತ್ತು ವಹಿಸಿರುವ ಶತಭಿಷ ಶಿವಣ್ಣನವರು ಅರ್ಜಿ ಸಲ್ಲಿಸಿದ್ದಾರೆ. ಸಿಎಂ ಪರ ವಕೀಲ ರವಿವರ್ಮ ಕುಮಾರ್ ತುರ್ತು ಅರ್ಜಿಯ ವಿಚಾರಣೆ ನಡೆಯಲಿ ಎಂದು ಮನವಿ ಮಾಡಿಕೊಂಡರು.

ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಎದುರು ಅರ್ಜಿ ಬಂದಿದೆ. ಸಿಎಂ ವಿರುದ್ಧ ದೂರು ಸಲ್ಲಿಸಿರುವ ಟಿ.ಜೆ ಅಬ್ರಾಹಿಂ, ಸ್ನೇಹಮಯಿ ಕೃಷ್ಣ, ವಕೀಲ ಎಸ್.ಪಿ ಪ್ರದೀಪ್ ಕುಮಾರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST