LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಸಂಪುಟ ಸರ್ಜರಿ.. 15 ಮಂತ್ರಿಗಳಿಗೆ ಕೊಕ್..?

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಸಧ್ಯ ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಚರ್ಚೆ ಜೋರಾಗಿ ನಡೆಯುತ್ತಿದೆ. ಬಿಹಾರ ವಿಧಾನಸಭೆ ಚುನಾವಣೆಯ ಬಳಿಕ ಮಂತ್ರಿಮಂಡಲ ಪುನರ್ ರಚನೆಯಾಗಲಿದ್ದು, ಶೇಕಡ 50ರಷ್ಟು ಅಂದರೆ 15 ಸಚಿವರನ್ನು ಸಂಪುಟದಿಂದ ಕೈ ಬಿಡಲಾಗುತ್ತೆ ಎಂದು ಹೇಳಲಾಗುತ್ತಿದೆ. ಹೊಸಬರಿಗೆ ಅವಕಾಶ ನೀಡುವ ಮೂಲಕ ಮತ್ತೊಂದು ಸಂದೇಶ ನೀಡಲು ಹೈಕಮಾಂಡ್ ತೀರ್ಮಾನಿಸಿದಂತೆ.

ಸರ್ಕಾರ ಎರಡೂವರೆ ಪೂರ್ಣಗೊಳಿಸಿದೆ. ಹೀಗಾಗಿ ಸಚಿವ ಸಂಪುಟ ಪುನರ್ ರಚನೆಗೆ ಹೈಕಮಾಂಡ್ ಸೂಚನೆ ನೀಡಿದೆಯಂತೆ. ಆದ್ದರಿಂದ ನವೆಂಬರ್ 14ರಂದು ಬಿಹಾರ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ರಾಜ್ಯ ಸರ್ಕಾರದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ. ಬಿ.ನಾಗೇಂದ್ರ ಹಾಗೂ ಕೆ.ಎನ್ ರಾಜಣ್ಣ ಅವರಿಂದ ತೆರವಾದ ಸ್ಥಾನಗಳು ಸೇರಿ ಹಾಲಿ ಸಚಿವರಲ್ಲಿ ಕೆಲವರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ನೀಡಲು ಚಿಂತನೆ ನಡೆದಿದೆಯಂತೆ. ಯಾವ ಮಾನದಂಡಗಳನ್ನು ಇಟ್ಟುಕೊಂಡು ಕೈ ಬಿಡಲಾಗುತ್ತೆ ಅನ್ನೋ ಕುತೂಹಲ ಮೂಡಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST