LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಮತ್ತೆ ಕರೋನಾ ಆತಂಕ ಶುರು

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ರಾಜ್ಯದಲ್ಲಿ ಇದೀಗ ಮತ್ತೆ ಕರೋನಾ ಆತಂಕ ಶುರುವಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಲ್ಲಿ ಹೆಚ್ಚು ಪ್ರಕರಣಗಳು ಕಂಡು ಬಂದಿದ್ದು, ನಗರದ ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲು ಇಡುವಂತೆ ಸರ್ಕಾರ ಸೂಚನೆ ನೀಡಿದೆ. ರಾಜ್ಯದಲ್ಲಿ 80 ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಅದರಲ್ಲಿ 73 ಜನರು ಬೆಂಗಳೂರು ನಿವಾಸಿಗಳು ಅನ್ನೋದು ಅಲ್ಲಿನ ಜನರಲ್ಲಿ ಆತಂಕ ತಂದಿದೆ.

ಮುಂಜಾಗ್ರತ ಕ್ರಮವಾಗಿ ನಗರದಲ್ಲಿರುವ ವಿಕ್ಟೋರಿಯಾ, ರಾಜೀವ್ ಗಾಂಧಿ, ಬೆಂಗಳೂರು ಆಸ್ಪತ್ರೆ ಸೇರಿದಂತೆ ಹಲವು ಪ್ರಮುಖ ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲು ಇಡುವಂತೆ ಸೂಚಿಸಲಾಗಿದೆ. ಕೋವಿಡ್ ನಿಂದ ಮೃತಪಟ್ಟ ಪ್ರಕರಣಗಳು ಎಲ್ಲಿಯೂ ದಾಖಲಾಗಿಲ್ಲ. ಆರೋಗ್ಯ ಇಲಾಖೆ ಈ ಬಗ್ಗೆ ಸಂಪೂರ್ಣ ನಿಗಾ ವಹಿಸಿದೆ. ಇದನ್ನು ನಿಯಂತ್ರಣಕ್ಕೆ ತರಲು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಲಾಗಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST