ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥರನ್ನು ಸರ್ಕಾರ ಬದಲು ಮಾಡಿದೆ. ಐಜಿಪಿ ಶಶಿಕುಮಾರ್ ಅವರು ಎಸ್ಐಟಿ ಮುಖ್ಯಸ್ಥ ಸ್ಥಾನದಿಂದ ತಮ್ಮನ್ನು ಕೈ ಬಿಡುವಂತೆ ಕೋರಿದ್ದರು. ಹೀಗಾಗಿ ಸರ್ಕಾರ ಅವರನ್ನು ಬದಲಾಯಿಸಿದೆ.
ಈಗ ಇವರ ಜಾಗಕ್ಕೆ ಸಿಐಡಿ ಐಜಿಪಿ ಚೇತನ್ ಸಿಂಗ್ ರಾಥೋಡ್ ಅವರನ್ನು ನೇಮಕ ಮಾಡಲಾಗಿದೆ. ಹಾಸನ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.


