LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಟಿಕೆಟ್ ಗಾಗಿ ಭಕಪಕ್ಷಿಯಂತೆ ಕಾಯುತ್ತಿದ್ದೇನೆ: ಸಿ.ಪಿ ಯೋಗೇಶ್ವರ್

ಪ್ರಜಾಸ್ತ್ರ ಸುದ್ದಿ

ಚನ್ನಪಟ್ಟಣ(Channapattana): ನಾನು ಬಿಜೆಪಿ ಹಾಗೂ ಜೆಡಿಎಸ್ ನಾಯಕರೊಂದಿಗೆ ಚರ್ಚಿಸಿದ್ದೇನೆ. ನನಗಿರುವ ಮಾಹಿತಿ ಪ್ರಕಾರ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯೆಂದು ನನ್ನ ಹೆಸರು ಅಂತಿಮಗೊಳಿಸುತ್ತಾರೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯ ಟಿಕೆಟ್ ಗಾಗಿ ಭಕಪಕ್ಷಿಯಂತೆ ಕಾಯುತ್ತಿದ್ದೇನೆ ಎಂದು ಪರಿಷತ್ ಬಿಜೆಪಿ ಸದಸ್ಯ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯ ಹಾಗೂ ಕೇಂದ್ರ ನಾಯಕರ ಬಳಿ ಮಾತನಾಡಿದ್ದೇನೆ. ಕುಮಾರಸ್ವಾಮಿ ಜೊತೆಗೆ ಈ ಹಿಂದೆ ಬಹಳ ಸಾರಿ ಮಾತನಾಡಿದ್ದೇನೆ. ಕ್ಷೇತ್ರದಲ್ಲಿ ಸರ್ವೇ ನಡೆಸಲಾಗಿದೆ. ಅದರಲ್ಲಿ ನನ್ನ ಹೆಸರು ಬಂದಿದೆ. ನನಗೆ ಟಿಕೆಟ್ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ. ಒಂದು ವೇಳೆ ಕೊಡದಿದ್ದರೆ ಏನು ಮಾಡಬೇಕು ಎಂದು ಕಾರ್ಯಕರ್ತರ ಅಭಿಪ್ರಾಯ ಪಡೆದು ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST