LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಾಮೀನಿಗೆ ಅರ್ಜಿ ಸಲ್ಲಿಸಿದ ದರ್ಶನ್

ಪ್ರಜಾಸ್ತ್ರ ಸುದ್ದಿ

ಬಳ್ಳಾರಿ(Ballari): ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್(Actor Darshan) ನ್ಯಾಯಾಂಗ ಬಂಧನದಲ್ಲಿದ್ದು 100 ದಿನಗಳಾಗಿವೆ. ಈಗಾಗ್ಲೇ ಪೊಲೀಸರು 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ನಟ ದರ್ಶನ್ ಮೊದಲ ಬಾರಿಗೆ ಶನಿವಾರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. 57ನೇ ಸಿಸಿಎಚ್(CCH Court) ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದ ಪ್ರಕರಣದ ಬಳಿಕ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಅವರ ತಾಯಿ ಮೊದಲ ಬಾರಿಗೆ ಜೈಲಿಗೆ ಬಂದು ಮಗನನ್ನು ಭೇಟಿಯಾದರು. ಇವರೊಂದಿಗೆ ಸಹೋದರಿ, ಭಾವ ಹಾಗೂ ಅವರ ಮಕ್ಕಳು ಸಹ ಬಂದಿದ್ದರು. ಈ ವೇಳೆ ಮಗನಿಗೆ ತಾಯಿ ಧೈರ್ಯ ತುಂಬುವ ಕೆಲಸ ಮಾಡಿದ್ದರು. ಪತ್ನಿ ವಿಜಯಲಕ್ಷ್ಮಿ ಸದಾ ಬರುತ್ತಲೇ ಇದ್ದಾರೆ. ಸಹೋದರ ದಿನಕರ್ ತೂಗದೀಪ್ ಕೂಡಾ ಆಗಾಗ ಬಂದು ಭೇಟಿಯಾಗುತ್ತಿದ್ದಾರೆ. ಇದೀಗ ದರ್ಶನ್ ಪರ ವಕೀಲರು ಜಾಮೀನಿಗಾಗಿ(Bail) ಅರ್ಜಿ ಸಲ್ಲಿಸಿದ್ದಾರೆ. ಕೊಲೆ ಪ್ರಕರಣದಲ್ಲಿ 17 ಆರೋಪಿಗಳನ್ನು ಬೇರೆ ಬೇರೆ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST