LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಾವಣಗೆರೆ: ಅರಣ್ಯ ಸಿಬ್ಬಂದಿ ಮೇಲೆ ಚಿರತೆ ದಾಳಿ

ಪ್ರಜಾಸ್ತ್ರ ಸುದ್ದಿ

ದಾವಣಗೆರೆ(Davanagere): ಗಾಯಗೊಂಡಿದ್ದ ಚಿರತೆಯನ್ನು ರಕ್ಷಣೆ ಮಾಡುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿದ ಘಟನೆ ಆನಗೋಡು ಹತ್ತಿರದ ರಾಷ್ಟ್ರೀಯ ಹೆದ್ದಾರಿ 48ರ ಬಳಿ ನಡೆದಿದೆ. ಸೋಮವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿಯಿಂದ ಗಾಯಗೊಂಡ ಚಿರತೆ ಹೆದ್ದಾರಿ ಹತ್ತಿರದ ಚರಂಡಿಯಲ್ಲಿ ನರಳುತ್ತಿತ್ತು.

ಈ ವಿಚಾರ ತಿಳಿದ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಮಂಗಳವಾರ ಮುಂಜಾನೆ ಸ್ಥಳಕ್ಕೆ ಬಂದಿದ್ದಾರೆ. ಚಿಕಿತ್ಸೆ ನೀಡುವ ಸಲುವಾಗಿ ಚಿರತೆ ಹಿಡಿಯುವ ವೇಳೆ ದಾಳಿ ಮಾಡಿದೆ. ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಪೇಟೆಯಿಂದ ಬಂದ ವನ್ಯಜೀವಿ ಪಶುವೈದ್ಯರು ಅರವಳಿಕೆ ನೀಡಿದರು. ನಂತರ ಬಲೆ ಹಾಕಿ ಚಿರತೆ ಹಿಡಿಯಲಾಯಿತು.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST