LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಅಗಲೀಕರಣ, ಅತಿಕ್ರಮಣ ತೆರವಿಗೆ ಡಿಸಿ ಸೂಚನೆ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ನಗರ ಪರಿವೀಕ್ಷಣೆ ನಡೆಸಿ, ನಗರದ ವಿವಿಧ ರಸ್ತೆಗಳ(Road) ಅಭಿವೃದ್ದಿ ಕೆಲಸ ನಡೆಯುತ್ತಿದೆ. ಹೀಗಾಗಿ ಅತಿಕ್ರಮ ತೆರವುಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಬಾಗಲಕೋಟ ರಸ್ತೆ, ಅತಾವುಲ್ಲಾ ಚೌಕ್ ಹತ್ತಿರ ಕಂದಕ ಹಾಗೂ ನೌಬಾಗ್ ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಹಾಗೂ ಅಗಲೀಕರಣ ಕಾಮಗಾರಿಗಳ ಪರಿವೀಕ್ಷಣೆ ಕೈಗೊಂಡರು. ನವಬಾಗ್ ರಸ್ತೆಯ ಅಗಲೀಕರಣ ಬಗ್ಗೆ ಸರ್ವೇ ಕಾರ್ಯವನ್ನು ಕೈಗೊಂಡು ಅತಿಕ್ರಮಣವನ್ನು ತೆರವುಗೊಳಿಸಲು ಅಗತ್ಯ ಕ್ರಮಕೈಗೊಳ್ಳಲು, ಪಾಲಿಕೆಯ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ವಾರ್ಡ್ 28ರ ಸರ್ಕಾರಿ ಪದವಿ ಪೂರ್ವ ಕಾಲೇಜಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ, ಸದರಿ ಕಾಮಗಾರಿಯನ್ನು 15 ದಿನಗಳ ಒಳಗಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಒಡಾಟಕ್ಕೆ ಅನುಕೂಲ ಕಲ್ಪಿಸುವಂತೆ ಸೂಚಿಸಿದರು. ನಗರದಲ್ಲಿರುವ ಬೇಗಂ ತಾಲಾಬ್ ಕೆರೆ ಪರಿವೀಕ್ಷಣೆ ಕೈಗೊಂಡು, ವಾಯು ವಿಹಾರಕ್ಕೆ ಬರುವ  ಸಾರ್ವಜನಿಕರಿಗೆ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ, ಉದ್ಯಾನವನದಲ್ಲಿರುವ ಮೂಲಭೂತ  ಸೌಕರ್ಯಗಳು, ಫೋಡ್ ಕೋರ್ಟ್ ಹಾಗೂ ಇತರೆ ಸೌಲಭ್ಯಗಳನ್ನು ಕೂಡಲೇ ಟೆಂಡರ್ ಕರೆದು ಕ್ರಮಕೈಗೊಳ್ಳಲು ಸೂಚಿಸಿದರು.

ನಗರದ ತಾಜ್ ಬಾವಡಿಯ ಪರಿವೀಕ್ಷಣೆ ನಡೆಸಿ, ಸದರಿ ಬಾವಿಯ ಪುನಶ್ಚೇತನ ಕಾಮಗಾರಿಯನ್ನು ಪೂರ್ಣಗೊಳಿಸಲು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಶಿವಾಜಿ ವೃತ್ತದ ಹತ್ತಿರುವ ಇರುವ ಕಂದಕವನ್ನು ಹಾಗೂ ಬೇಗಂ ತಲಾಬ್ ಅಭಿವೃದ್ಧಿಪಡಿಸಲು ಮಹಾನಗರ ಪಾಲಿಕೆಯ ಮಹಾಪೌರರು ಹಾಕಿಕೊಂಡಿರುವ ಕಾಮಗಾರಿಯ ಯೋಜನೆಗಳನ್ನು ಪೂರ್ಣಗೊಳಿಸಬೇಕು. ನಗರದ ಸೋಲಾಪೂರ ರಸ್ತೆಯಲ್ಲಿರುವ ಕಬ್ರಸ್ತಾನ್ ಪರಿಶೀಲಿಸಿ, ಕಾಂಪೌಂಡ್ ಕಾಮಗಾರಿ ತುರ್ತಾಗಿ ಪೂರ್ಣಗೊಳಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಮಹಾನಗರ ಪಾಲಿಕೆಯ ವಿವಿಧ ಸದಸ್ಯರು, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ತಹಶೀಲ್ದಾರ್, ಪಾಲಿಕೆ ಅಭಿಯಂತರರು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST