LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೇರೆಯವರ ಉಡುಗೊರೆ ಮತ್ತೊಬ್ಬರಿಗೆ ನೀಡುವ ದುಸ್ಥಿತಿ ಬಂದಿಲ್ಲ: ಡಿಸಿಎಂ ಡಿಕೆಶಿ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaluru): ಭಾನುವಾರ ನಡೆದ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಳ್ಳಿ ಗಣಪತಿ ವಿಗ್ರಹವನ್ನು ಉಡುಗರೆಯಾಗಿ ನೀಡಿದ್ದಾರೆ. ಇದು ಬಿಜೆಪಿ ಶಾಸಕ ಎಂ.ಕೃಷ್ಣಪ್ಪ ಪ್ರಧಾನಿಗೆ ಕೊಡಲು ತಂದಿದ್ದು ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದಕ್ಕೆ ಡಿಸಿಎಂ ಕಿಡಿ ಕಾರಿದ್ದು, ಬೇರೆಯವರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ದುಸ್ಥಿತಿ ಬಂದಿಲ್ಲ ಎಂದಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನ ಆರ್.ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವಣ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ಸ್ವಂತದ್ದು. ಅಂದಿನ ಸಮಾರಂಭದಲ್ಲಿ ನಾನು ಪ್ರಧಾನಿ ಅವರಿಗೆ ನೀಡಿದ ಪ್ರತಿಮೆ ಬಿಜೆಪಿ ಶಾಸಕ ಎಂ.ಕೃಷ್ಣಪ್ಪ ಅವರು ತಂದದ್ದು ಎಂಬ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ವರದಿ ಸತ್ಯಕ್ಕೆ ದೂರವಾದದ್ದು ಹಾಗೂ ಸಂಪೂರ್ಣ ಸುಳ್ಳು. ಆ ಪ್ರತಿಮೆಯನ್ನು ನನ್ನ ಸ್ವಂತ ಹಣದಿಂದ ಖರೀದಿಸಿದ್ದಾಗಿದೆ. ಇದಕ್ಕೆ ಇಲಾಖೆಯ ಹಣವನ್ನು ಬಳಸಿಲ್ಲ. ಮನೆಯಿಂದ ತೆಗೆದುಕೊಂಡು ಹೋಗಿ ಕಚೇರಿ ಸಿಬ್ಬಂದಿ ಮೂಲಕ ಎಸ್ ಪಿಜಿ ತಪಾಸಣೆಗೆ ಒಳಪಡಿಸಿ ಪ್ರಧಾನಿಯವರಿಗೆ ನೀಡಲಾಯಿತು ಎಂದು ಹೇಳಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST