LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತುಳು 2ನೇ ಹೆಚ್ಚುವರಿ ಭಾಷೆಯಾಗಿ ಘೋಷಣೆ

ಸಚಿವ ಸಂಪುಟದ ಪ್ರಮುಖ ಅಂಶಗಳು ಇಲ್ಲಿವೆ…

ಪ್ರಜಾಸ್ತ್ರ ಸುದ್ದಿ

ಮಂಗಳೂರು(Mangaloru): ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯವಾಗುವಂತೆ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಮೂಲಕ ಈ ಭಾಗದ ಜನರು ಬಹುದಿನಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಹೆಸರು ಬದಲಾಯಿಸುವ ಸಂಬಂಧ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಣೆಗೆ ಒಂದು ತಿಂಗಳು ಕಾಲಾವಕಾಶ ನೀಡಲಾಗಿದೆ. ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಸೇಡಿಯಾಪು ಹತ್ತಿರ ಗುರುತಿಸಲಾಗಿರುವ ಜಾಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು, ಬೋಧನಾ ಆಸ್ಪತ್ರೆ, ವಸತಿ ನಿಲಯ ಸೇರಿದಂತೆ ಇತರೆ ಸೌಕರ್ಯಗಳಿಗಾಗಿ 549.79 ಕೋಟಿ ವೆಚ್ಚದಲ್ಲಿ ನಿರ್ವಮಿಸಲು ಅನುಮೋದನೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 12 ದ್ವೀಪಗಳನ್ನು ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು 500 ಕೋಟಿ ರೂಪಾಯಿ ವೆಚ್ಚದ ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ-2026 ಅನುಷ್ಠಾನಕ್ಕೆ ಅನುಮೋದನೆ ನೀಡಲಾಗಿದೆ. ಹೀಗೆ ಈ ಭಾಗದ ಜಿಲ್ಲೆಗಳಲ್ಲಿ ಅಭಿವೃದ್ಧಿ ವಿಚಾರಕ್ಕೆ ಸಂಬಧಿಸಿದಂತೆ ಹಲವು ಮಹತ್ವದ ವಿಚಾರಗಳಿಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST