ಪ್ರಜಾಸ್ತ್ರ ಸುದ್ದಿ
ಬಾಗಲಕೋಟೆ(Bagalakote): ಪರಿಹಾರ ವಿತರಣೆ ಸಂಬಂಧ ರೈತರು ಪ್ರತಿಭಟನೆ ನಡೆಸಿದ್ದು, ಪಟ್ಟಣದ ಪ್ರಾಧಿಕಾರದ ಸಿಬ್ಬಂದಿ ಮೇಲೆ ರೈತರೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಅಂಕದ ಅನ್ನೋ ಸಿಬ್ಬಂದಿ ಮೇಲೆ ರೈತ ಬಸಪ್ಪ ಎಂಬುವರು ಹಲ್ಲೆ ಮಾಡಿದ್ದಾರೆ. ಪರಿಹಾರದ ವಿಚಾರದಲ್ಲಿ ರೈತರಿಗೆ ಪದೆಪದೆ ಅಲೆದಾಡಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.



