ಪ್ರಜಾಸ್ತ್ರ ಸುದ್ದಿ
ಧಾರವಾಡ(Dharwad): ಜೈಲರ್ ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸ ಬಸ್ ನಿಲ್ದಾಣದ ಹತ್ತಿರದ ಕಾರಾಗೃಹದ ವಸತಿ ನಿಲಯದಲ್ಲಿ ನಡೆದಿದೆ. ಸಿದ್ದರಾಮಪ್ಪ ವಡ್ಡರ(37) ಆತ್ಮಹತ್ಯೆ ಮಾಡಿಕೊಂಡಿರುವ ಜೈಲರ್ ಆಗಿದ್ದಾರೆ. ಕರ್ತವ್ಯಲೋಪದ ವಿಚಾರಕ್ಕೆ ಸಂಬಂಧಿಸಿದಂತೆ 2 ತಿಂಗಳ ಹಿಂದೆ ಸಿದ್ದರಾಪ್ಪನನ್ನು ಅಮಾನತು ಮಾಡಲಾಗಿತ್ತು. ನಂತರ ಮೈಸೂರಿಗೆ ವರ್ಗಾವಣೆ ಮಾಡಲಾಗಿತ್ತು.
ವರ್ಗಾವಣೆಯಾದರೂ ಸಹ ಸಿದ್ದರಾಮಪ್ಪ ಮೈಸೂರಿಗೆ ಹೋಗಿ ವರದಿ ಮಾಡಿಕೊಂಡಿರಲಿಲ್ಲ. ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡನ ಆತ್ಮಹತ್ಯೆಗೆ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಪತ್ನಿ ಲಕ್ಷ್ಮಿ ಆರೋಪಿಸಿದ್ದಾರೆ. ಅಲೋಕ್ ಕುಮಾರ್ ನನ್ನ ಮೇಲೆ ಕ್ರಮ ತೆಗೆದುಕೊಳ್ಳುತ್ತಾರೆ. ಜೈಲಿಗೆ ಕಳಿಸುತ್ತಾರೆ ಎಂದು ಪತಿ ಹೇಳುತ್ತಿದ್ದರು ಅಂತಾ ಪತ್ನಿ ಹೇಳಿದ್ದಾರೆ.



