LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡ: ಜಮೀನು ವಿವಾದ, ಗುಂಡಿನ ದಾಳಿ

ಪ್ರಜಾಸ್ತ್ರ ಸುದ್ದಿ

ಧಾರವಾಡ(Dharwad): ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಗುಂಡಿನ ದಾಳಿಯಾಗಿರುವ ಘಟನೆ ಧಾರವಾಡ ಜಿಲ್ಲೆಯ ತಡಸಿನಕೊಪ್ಪ ಗ್ರಾಮದ ಹತ್ತಿರ ಮಂಗಳವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ 24 ವರ್ಷದ ವಿಠ್ಠಲ ಅನ್ನೋ ಯುವಕ ಗಾಯಗೊಂಡಿದ್ದು, ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. 

ಈ ಪ್ರಕರಣ ಸಂಬಂಧ ನಾಲ್ಕೈದು ಜನರನ್ನು ವಶಕ್ಕೆ ಪಡೆಯಲಾಗಿದೆ. ಇದಕ್ಕೆ ಯಾರೆಲ್ಲ ಕಾರಣರಾಗಿದ್ದಾರೆ ಅವರೆಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ ಅವರು ತಿಳಿಸಿದ್ದಾರೆ. ಈ ಘಟನೆ ಸಂಬಂಧ ಜಮೀನು ಮಾಲೀಕರ ಸಂಬಂಧಿ ಸಹ ಮಾತನಾಡಿದ್ದಾರೆ. ಗುಂಡು ಹಾರಿಸಿದವರು ಯಾರು? ಅವರ ಕೈಗೆ ಗನ್ ಹೇಗೆ ಬಂತು ಅನ್ನೋದು ಸೇರಿದಂತೆ ಹಲವಾರು ಪ್ರಶ್ನೆಗಳು ಮೂಡಿವೆ. ಘಟನೆಯಿಂದ ಜಿಲ್ಲೆಯ ಜನತೆಯಲ್ಲಿ ಆತಂಕ ಮೂಡಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST