ಪ್ರಜಾಸ್ತ್ರ ಸುದ್ದಿ
ಧಾರವಾಡ(Dharwad): ಈಜಲು ಹೋಗಿದ್ದ ಮೂವರು ಬಾಲಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಗನಹಳ್ಳಿ ಗ್ರಾಮದ ಕೆರೆಯಲ್ಲಿ ಶನಿವಾರ ನಡೆದಿದೆ. ಕೆರೆಗೆ ಈಜಲು ಹೋದ ಬಾಲಕರು ಕೆರೆ ಮಧ್ಯಭಾಗಕ್ಕೆ ಹೋಗಿದ್ದಾರೆ. ಈ ವೇಳೆ ಈಜಲು ಆಗದೆ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಸಿಂಗನಹಳ್ಳಿ ಗ್ರಾಮದ ಅಬ್ಬಾಸ್ ವಟ್ನಾಳ್(12), ಅಸ್ಲಂ ವಟ್ನಾಳ್(10) ಹಾಗೂ ಬೆಳಗಾವಿ ಜಿಲ್ಲೆ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ(10) ಮೃತ ಬಾಲಕರೆಂದು ತಿಳಿದು ಬಂದಿದೆ. ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಸ್ಥಳಕ್ಕೆ ಧಾರವಾಡ ಎಸ್ಪಿ ಗುಂಜನ್ ಆರ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.



