LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ಎಸ್ಎಲ್ ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಪಾರದರ್ಶಕ, ವ್ಯವಸ್ಥಿತ ಹಾಗೂ ಸುಸೂತ್ರವಾಗಿ ನಡೆಸಬೇಕೆಂದು ಪರೀಕ್ಷೆಗೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ ನೀಡಿದರು. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮದಿರದಲ್ಲಿ ಮಂಗಳವಾರ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಜಿಲ್ಲಾ ಮಟ್ಟದ  ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ನಿಯೋಜಿತ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ವಹಿಸಬೇಕಾದ ಕರ್ತವ್ಯ ಹಾಗೂ ಜವಾಬ್ದಾರಿ ಹಾಗೂ ನಿರ್ವಹಣೆ ಕುರಿತ ಸಲಹೆ ನೀಡಿದರು.

ಸಿಸಿಟಿವಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಪರಿಶೀಲನೆ ನಡೆಸಬೇಕು. ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ಈ ಮೂಲಕ  ಪರೀಕ್ಷೆಯ ಪಾವಿತ್ರ‍್ಯತೆ ಕಾಯ್ದುಕೊಳ್ಳಬೇಕು. ಬಿಇಒ, ತಹಶೀಲ್ದಾರ್ ಅವರು ತಾಲೂಕಿನಲ್ಲಿ ಸಭೆ ನಡೆಸಿ ಅಗತ್ಯ ಸೂಚನೆ ನೀಡಬೇಕು. ಮೈಕ್ರೊ ಪ್ಲ್ಯಾನಿಂಗ್ ಮಾಡಿಕೊಳ್ಳಬೇಕು. ಪರೀಕ್ಷಾ ಪ್ರಕ್ರಿಯೆಯಲ್ಲಿ ಲೋಪ-ದೋಷಗಳಾಗಬಾರದು. ಆರೋಗ್ಯ ಇಲಾಖೆಯಿಂದ ಅಗತ್ಯ ಸಿಬ್ಬಂದಿ ನಿಯೋಜಿಸಬೇಕು ಎಂದರು.

ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಪರೀಕ್ಷಾ ಕೇಂದ್ರದ ಮುಖ್ಯ ಅಧಿಕ್ಷಕರ ಕಾರ್ಯ ಗುರುತರವಾಗಿದೆ. ನಮ್ಮ ಜಿಲ್ಲೆಯಲ್ಲಿ ಪರೀಕ್ಷೆಯನ್ನು ಯಾವುದೇ ಲೋಪ ಆಗದಂತೆ ನೋಡಿಕೊಳ್ಳಬೇಕು. ಪರೀಕ್ಷೆಗೆ  ನಿಯೋಜಿತ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಮಾತನಾಡಿ, ಎಸ್‌ಎಸ್ ಎಲ್‌ಸಿ ಪರೀಕ್ಷೆ ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲ 137  ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುವುದು ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ ಮಾತನಾಡಿ, ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ನಡೆಯುವ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 42,450 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದಾರೆ. 137 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಯಾವುದೇ ಲೋಪವಾಗದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಭೆಗೆ ವಿವರಿಸಿದರು. ಈ ಸಂದರ್ಭದಲ್ಲಿ  ಡೈಟ್ ಪ್ರಾಚಾರ್ಯರಾದ ಉಮಾದೇವಿ ಸೊನ್ನದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ತೋಟಗಾರಿಕಾ ಇಲಾಖೆಯ ಅಧಿಕಾರಿ ರಾಹುಲ್ ಭಾವಿದೊಡ್ಡಿ, ವಿಷಯ ಪರಿವೀಕ್ಷಕ ಶಿವಾನಂದ ಬ್ಯಾಹಟ್ಟಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST