LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಕ್ಷದ ತೀರ್ಮಾನ ಅಂತಿಮ, ಪದೆಪದೆ ಇದನ್ನೇ ಕೇಳಬೇಡಿ: ಸಿಎಂ

ಪ್ರಜಾಸ್ತ್ರ ಸುದ್ದಿ

ಹಾವೇರಿ(Haveri): ರಾಜ್ಯ ಸರ್ಕಾರದ ಸಾವಿರ ದಿನಗಳ ಸಂಭ್ರಮವನ್ನು ಆಚರಿಸುವ ಸಂಬಂಧ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಹೀಗಾಗಿ ಇಲ್ಲಿಗೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೆಡಿಕಲ್ ಕಾಲೇಜು ಆವರಣದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇದುವರೆಗೂ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಮುಂದೆಯೂ ನಡೆದುಕೊಳ್ಳುತ್ತೇವೆ. ಬಿಜೆಪಿಯವರು ಹೊಟ್ಟೆಕಿಚ್ಚಿನಿಂದ ವಿರೋಧಿಸುತ್ತಿದ್ದಾರೆ ಎಂದರು.

2018ರಲ್ಲಿ ಬಿಜೆಪಿಯವರು 600 ಭರವಸೆಗಳನ್ನು ಕೊಟ್ಟಿದ್ದರು. ಅದರಲ್ಲಿ ಶೇಕಡ 10ರಷ್ಟು ಸಹ ಈಡೇರಿಸಿಲ್ಲ. ನಾವು ನೀಡಿದ್ದ 592 ಭರವಸೆಗಳಲ್ಲಿ ಎರಡುವರೆ ವರ್ಷಗಳಲ್ಲಿಯೇ 243 ಭರವಸೆಗಳನ್ನು ಈಡೇರಿಸಿದ್ದೇವೆ ಎಂದರು. ಇನ್ನು ಅಧಿಕಾರ ಹಂಚಿಕೆ ವಿಚಾರ ಸಂಬಂಧ ಕೇಳಿದ ಪ್ರಶ್ನೆಗೆ, ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನ ಅಂತಿಮ. ಈ ಬಗ್ಗೆ ಈಗಾಗ್ಲೇ ತಿಳಿಸಲಾಗಿದೆ. ವರಿಷ್ಠರು ಹೇಳಿದ್ದನ್ನು ಎಲ್ಲ ಶಾಸಕರು ಕೇಳಬೇಕು. ದೆಹಲಿಗೆ ಕರೆದಾಗ ಹೋಗುತ್ತೇನೆ. ಪದೆಪದೆ ಈ ಬಗ್ಗೆ ಪ್ರಶ್ನೆ ಕೇಳಬೇಡಿ ಅಂತಾ ಹೇಳಿದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST