ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ(Shivamogga): ಕಾಂಗ್ರೆಸ್ ಆಂತರಿಕ ಕಚ್ಚಾಟದಿಂದ ರಾಜ್ಯದಲ್ಲಿ ಆಡಳಿತ ಕುಸಿದಿದೆ. ಸರ್ಕಾರದ ವೈಫಲ್ಯ ಸಹ ಹೈಕಮಾಂಡ್ ಗಮನಕ್ಕೆ ಬಂದಿದೆ. ಈ ಕಾರಣಕ್ಕೆ ಮುಖ್ಯಮಂತ್ರಿ ಬದಲಾವಣೆ ತೀರ್ಮಾನಕ್ಕೆ ಬಂದಿದ್ದಾರೆ. ನಾಯಕತ್ವ ಬದಲಾವಣೆಯಾದರೂ ಗೊಂದಲ ಮುಂದುವರೆಯುತ್ತೆ. ಅವಧಿಗೆ ಮುನ್ನವೇ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಂದೆ ಯಾರು ಮುಖ್ಯಮಂತ್ರಿ ಆಗುತ್ತಾರೆ ಅನ್ನೋದು ಮುಖ್ಯವಲ್ಲ. 10 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇದು ಬರುವವರಿಗೆ ದೊಡ್ಡ ಸವಾಲು ಇದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಉಪ ಚುನಾವಣೆಯಲ್ಲಿ ಗೆದ್ದರೂ ಸಹ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅನಿವಾರ್ಯತೆ ಬಂದಿದೆ ಎಂದರು.



