LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ!

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕನ್ನಡದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿರ್ದೇಶಕ ಗುರುಪ್ರಸಾದ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡು ಸುಮಾರು 10 ದಿನಗಳು ಆಗಿವೆ ಎಂದು ಹೇಳಲಾಗುತ್ತಿದೆ. ಮಾದನಾಯಕನಹಳ್ಳಿಯಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಘಟನೆ ಕನ್ನಡ ಚಿತ್ರರಂಗಕ್ಕೆ ದೊಡ್ಡ ಶಾಕ್ ನೀಡಿದೆ.

2006ರಲ್ಲಿ ಮಠ ಸಿನಿಮಾ ನಿರ್ದೇಶನದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುಪ್ರಸಾದ್ ದೊಡ್ಡ ಹೆಸರು ಮಾಡಿದರು. ಎದ್ದೇಳು ಮಂಜುನಾಥ್ ಸಿನಿಮಾಗೆ ಉತ್ತಮ ಚಿತ್ರದ ಪ್ರಶಸ್ತಿ ಬಂದಿತು. ಡೈರೆಕ್ಟರ್ ಸ್ಪೆಷಲ್ ಸೇರಿ 6 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ರಂಗನಾಯಕಿ ಇವರ ಕೊನೆಯ ನಿರ್ದೇಶನದ ಚಿತ್ರ. ಸುಮಾರು 12 ಚಿತ್ರಗಳಲ್ಲಿ ನಟಿಸಿದ್ದಾರೆ. ಕ್ರಿಯಾಶೀಲ ನಿರ್ದೇಶಕ ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿರುವುದು ಎಲ್ಲರಿಗೂ ಆಘಾತ ತಂದಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST