ಪ್ರಜಾಸ್ತ್ರ ಸುದ್ದಿ
ಉಡುಪಿ(Udupi): ಬಿಜೆಪಿ ವತಿಯಿಂದ ಕಾಂಗ್ರೆಸ್, ಸಿಜೆಪಿ ವಿರುದ್ಧ ಮಂಗಳವಾರ ನಗರದಲ್ಲಿ ನಡೆದ ಪ್ರತಿಭಟನೆ ವೇಳೆ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರತಿಭಟನೆಯ ವೇಳೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕೊಡವೂರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಸ್ಪಿ ಹೇಳಿದ್ದಾರೆ.



