LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಖಂಡ್ರೆಗೆ ಅವಾಚ್ಯಶಬ್ದಗಳಿಂದ ನಿಂದನೆ, ಖೂಬಾ ವಿರುದ್ಧ ಎಫ್ಐಆರ್

ಪ್ರಜಾಸ್ತ್ರ ಸುದ್ದಿ

ಭಾಲ್ಕಿ(Balki): ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಅವಾಚ್ಯಶಬ್ಧಗಳಿಂದ ನಿಂದಿಸಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತ ಕೇಂದ್ರದ ಬಿಜೆಪಿ ಮಾಜಿ ಸಚಿವ ಭಗವಂತ ಖೂಬಾ ವಿರುದ್ಧ ದೂರು ದಾಖಲಿಸಿದ್ದಾರೆ. ಬೀದರ ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸುರೇಶ ಬಿರಾದಾರ ಎಂಬುವರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.

ಈಶ್ವರ ಖಂಡ್ರೆ ನಿನ್ನ ಅವನತಿ ಶುರುವಾಗಿದೆ. ನೀನು ಸತ್ತರೆ ನಿನಗೆ ಮೋಕ್ಷ ಸಿಗುವುದಿಲ್ಲ. ಪೊಲೀಸರನ್ನು ಮುಂದಿಟ್ಟುಕೊಂಡು ಕಾರ್ಯಕ್ರಮ ಮಾಡ್ತೀದಿ. ನೀನು ಹಿಜಡಾ ಇದಿಯಾ ಎಂದು ನಿಂದಿಸಿದ್ದಾರೆ ಅಂತಾ ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಫೆಬ್ರವರಿ 7ರಂದು ಪಾಪನಾಶ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ಭೂಮಿಪೂಜೆ ವೇಳೆ ಪ್ರತಿಭಟನೆ ನಡೆಸಿದ್ದ ಬಿಜೆಪಿ ನಾಯಕರನ್ನು ವಶಕ್ಕೆ ಪಡೆಯಲಾಗಿತ್ತು. ನಂತರ ಫೇಸ್ ಬುಕ್ ಲೈವ್ ನಲ್ಲಿ ಖೂಬಾ ಅವಾಚ್ಯ ಶಬ್ಧಳಿಂದ ಖಂಡ್ರೆ ಅವರನ್ನು ನಿಂದಿಸಿದ್ದಾರೆ ಎಂದು ಹೇಳಲಾಗಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST