LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈಲಿನಲ್ಲಿ ಬೆಂಕಿ, 60ಕ್ಕೂ ಹೆಚ್ಚು ಪ್ರಯಾಣಿಕರ ರಕ್ಷಣೆ

ಪ್ರಜಾಸ್ತ್ರ ಸುದ್ದಿ

ಇಂದೋರ್(Indore): ಭಾನುವಾರ ಮುಂಜಾನೆ ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಸಂಚರಿಸುತ್ತಿದ್ದ ತಿರುವನಂತಪುರಂ-ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುಂಜಾನೆ ಸುಮಾರು 5.15ರ ವೇಳೆ ಬಿ-1 ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡದ್ದ ಬೋಗಿಯನ್ನು ರೈಲಿನಿಂದ ಬೇರ್ಪಡಿಸಲಾಗಿದೆ. ಬಿ-1 ಬೋಗಿಯಲ್ಲಿದ್ದ 68 ಪ್ರಯಾಣಿಕರನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ಯಾವುದೇ ಸಾವು ನೋವು ಸಂಭವಿಸಿಲ್ಲವೆಂದು ತಿಳಿಸಿದ್ದಾರೆ. ಅಲೋಟ್ ಹಾಗೂ ಲುನಿರಿಚಾ ನಿಲ್ದಾಣಗಳ ನಡುವೆ ಇಂತಹದೊಂದು ಅನಾಹುತ ಸಂಭವಿಸಿದೆ.

Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST