LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಚಿವ ವೆಂಕಟರಮಣಪ್ಪ ನಿಧನ

ಪ್ರಜಾಸ್ತ್ರ ಸುದ್ದಿ

ತುಮಕೂರು(Tumakoru): ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ(85) ಶುಕ್ರವಾರ ನಸುಕಿನಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅನಾರೋಗ್ಯದ ಕಾರಣಕ್ಕೆ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪಾವಗಡ ಪಟ್ಟಣದ ಗುರುಭವನದಲ್ಲಿ ಮಧ್ಯಾಹ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ತಿಳಿಸಲಾಗಿದೆ.

4 ಬಾರಿ ಶಾಸಕರಾಗಿದ್ದ ಇವರು, 2008ರಲ್ಲಿ ರೇಷ್ಮೆ ಮತ್ತು ಸಣ್ಣ ಕೈಗಾರಿಕಾ ಸಚಿವರಾಗಿದ್ದರು. 2018ರಲ್ಲಿ ಕಾರ್ಮಿಕ ಸಚಿವರಾಗಿದ್ದರು. ಪುತ್ರ, ಶಾಸಕ ಎಚ್.ವಿ ವೆಂಕಟೇಶ, ಕುಮಾರಸ್ವಾಮಿ, ಪುತ್ರಿ ಪದ್ಮಾವತಿ ಸೇರಿದಂತೆ ಬಂಧು, ಬಳಗವನ್ನು ಅಗಲಿದ್ದಾರೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST