LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಚಿತ ಬ್ಯೂಟಿ ಪಾರ್ಲರ್ ತರಬೇತಿ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ(Beauty Parlour) ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.  ನವೆಂಬರ್ 05 ರಿಂದ ತರಬೇತಿ ಪ್ರಾರಂಭವಾಗಲಿದ್ದು, ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. 18 ರಿಂದ 45 ವರ್ಷದವರಾಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 18 ಕೊನೆಯ ದಿನವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತರಬೇತಿಯು ವಸತಿಯುತವಾಗಿದೆ. ತರಬೇತಿಯ(Training) ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ(Accommodation) ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST