LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇವರ ಹಿಪ್ಪರಗಿ ಯುವಕ ಗೋವಾದಲ್ಲಿ ಸಾವು

ಪ್ರಜಾಸ್ತ್ರ ಸುದ್ದಿ

ದೇವರ ಹಿಪ್ಪರಗಿ(Devara Hipparagi): ಪ್ರವಾಸಕ್ಕೆ ಹೋಗಿದ್ದ ಯುವಕ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮೃತಪಟ್ಟಿರುವ ಘಟನೆ ಗೋವಾದ ಬಾಗಾ ಬೀಚ್ ನಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದ ಅಸ್ಪಾಕ್ ಮಸಳಿ(34) ಮೃತ ಯುವಕ. ಮೃತ ಯುವಕ ಹೆತ್ತವರನ್ನು, ಪತ್ನಿ, ಮೂವರು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.

ಅಪಾಯಕರ ಜಾಗದಲ್ಲಿ ಕುಳಿತಿದ್ದ ವೇಳೆ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿದ್ದಾರಂತೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿಯೂ ವೈರಲ್ ಆಗಿದೆ. ತೀವ್ರ ಕಾರ್ಯಾಚರಣೆಯ ಬಳಿಕ ಮೃತದೇಹ ಪತ್ತೆಯಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST