ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು ನಮ್ಮ ಸರ್ಕಾರ ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲವೆಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಪುನರಚ್ಚರಿಸಿದ ಸಿಎಂ, ವಿರೋಧ ಪಕ್ಷದವರ ಟೀಕೆಗೆ ಉತ್ತರಿಸುತ್ತಾ ಅವರ ಕೈಯಲ್ಲಿ ಆಗದ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸುವುದು ಸರ್ಕಾರದ ಕೆಲಸ ಎಂದರು.
ಈ ಯೋಜನೆಗಳು ಕರ್ನಾಟಕದ ಜನತೆಗೆ ನೀಡಲಾಗುತ್ತಿದೆ. ಅನ್ಯರಾಜ್ಯದವರಿಗೆ ಯಾಕೆ ನೀಡಬೇಕು. ನಮ್ಮ ರಾಜ್ಯದ ಮತದಾರರಿಗೆ ಉಚಿತ ನೀಡಬೇಕಿದೆ. ಹೀಗಾಗಿ ಗುರುತಿನ ಚೀಟಿ ನೀಡಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ. ಮಹಾರಾಷ್ಟ್ರ, ಆಂಧ್ರ, ಮಧ್ಯಪ್ರದೇಶ ಸೇರಿ ಅನೇಕ ರಾಜ್ಯಗಳಿಗೆ ನಮ್ಮ ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ. ಯೋಜನೆ ನಿಲ್ಲಿಸುವುದು ನಮ್ಮ ಉದ್ದೇಶವಿಲ್ಲ.



