LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳ ಕಾಲ ಗುಡುಗು ಸಹಿತಿ ಭಾರಿ ಮಳೆಯಾಗುವ ಮನ್ಸೂಚನೆ ನೀಡಲಾಗಿದೆ. ಮಲೆನಾಡು ಭಾಗದಲ್ಲಿ ಜುಲೈ 30, 31ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 1ರ ತನಕ ಅನೇಕ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆಯಂತೆ.

ದಕ್ಷಿಣ ಜಿಲ್ಲೆಗಳು, ಉತ್ತರ ಕನ್ನಡ ಜಿಲ್ಲೆಗಳು, ಕರಾವಳಿ ಭಾಗ, ಉಡುಪಿ ಸೇರಿ ಅನೇಕ ಜಿಲ್ಲೆಗಳಲ್ಲಿ ಬುಧವಾರದಿಂದ ಭಾರಿ ಮಳೆಯಾಗಲಿದೆಯಂತೆ. ಬೆಳಗಾವಿ ಭಾಗದ ತುಂಬ ಜುಲೈ 29ರಿಂದ ಆಗಸ್ಟ್ 1ರ ತನಕ ಭರ್ಜರಿ ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ ಭಾಗದಲ್ಲಿ ಗಾಳಿ ಸಹಿತಿ ಸಾಧಾರಣ ಮಳೆಯಾಗಲಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಹೀಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈಗಾಗ್ಲೇ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಬೆಂಗಳೂರು, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST