ಪ್ರಜಾಸ್ತ್ರ ಸುದ್ದಿ
ಕೋಲಾರ(Kolara): ಮಾಜಿ ಮುಖ್ಯಮಂತ್ರಿ ಹಾಗೂ ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯನವರಿಗೆ ಶ್ರೀ ದೇವರಾಜ ಅರಸು ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಕೇಂದ್ರದಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. 2025ರಲ್ಲೇ ಗೌರವ ಡಾಕ್ಟರೇಟ್ ಘೋಷಿಸಲಾಗಿತ್ತು. ಆಗ ಸಿಎಂ ಆಗಿದ್ದ ಸಿದ್ದರಾಮಯ್ಯನವರು ಬಂದಿರಲಿಲ್ಲ.
ನನಗೆ ಸಂಸ್ಥೆಯವರು ಗೌರವ ಡಾಕ್ಟರೇಟ್ ಕೊಟ್ಟಿದ್ದಾರೆ. ಅದಕ್ಕೆ ನಾನು ಅರ್ಹನೋ ಅನರ್ಹನೋ ಗೊತ್ತಿಲ್ಲ. 8 ವರ್ಷ ಮುಖ್ಯಮಂತ್ರಿಯಾಗಿ ದೇವರಾಜ ಅರಸು ಅವರನ್ನು ಹಿಂದೆ ಹಾಕಿದ್ದೇನೆ. 17 ಬಜೆಟ್ ಮಂಡಿಸಿದ್ದೇನೆ. ಹೀಗಾಗಿ ಕೊಟ್ಟಿರಬಹುದು. ಈಗ ಸ್ವೀಕಾರ ಮಾಡಿದ್ದೇನೆ ಎಂದರು. ಈ ವೇಳೆ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ, ರಾಮಲಿಂಗಾ ರೆಡ್ಡಿ ಸೇರಿದಂತೆ ಗಣ್ಯರು ವೇದಿಕೆ ಮೇಲಿದ್ದರು.


